More

    ಕಾಂಗ್ರೆಸ್​ನಿಂದ ಬೃಹತ್ ಪ್ರತಿಭಟನೆ ನಾಳೆ

    ಹಿರೇಕೆರೂರ: ಹಿರೇಕೆರೂರ ವಿಧಾನಸಭಾ ಕ್ಷೇತ್ರದಲ್ಲಿ ತುಂಗಾ ಮೇಲ್ದಂಡೆ ಯೋಜನೆ ಕಾಲುವೆ ನಿರ್ವಣಕ್ಕೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಆ. 30 ರಂದು ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಹೇಳಿದರು.

    ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆ ನಿರ್ವಣದ ಕಾಮಗಾರಿಗೆ ಸರ್ಕಾರ ರೈತರ ಜಮೀನುಗಳನ್ನು ಭೂಸ್ವಾಧೀನ ಮಾಡಿಕೊಂಡು ಬರೋಬ್ಬರಿ 22 ವರ್ಷಗಳಾಗಿದೆ. ಪರಿಹಾರ ನೀಡುವಲ್ಲಿ ವಿನಾಕಾರಣ ವಿಳಂಬ ನೀತಿ ಅನುಸರಿಸುತ್ತಿದ್ದು, ರೈತರ ಹಿತ ಕಾಪಾಡುವಲ್ಲಿ ಈ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.

    ತಾಲೂಕಿನಲ್ಲಿ ಭೂಸ್ವಾಧೀನ ಕಚೇರಿ ಇಲ್ಲ. ಕೂಡಲೆ ಕಚೇರಿ ಆರಂಭಿಸಿ ಕಾಯಂ ಸಿಬ್ಬಂದಿ ನೇಮಿಸಬೇಕು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದು, ಕೂಡಲೆ ಸರ್ಕಾರ ಅವರ ನೆರವಿಗೆ ಧಾವಿಸಬೇಕು. ಅತಿವೃಷ್ಟಿಯಾಗಿ ಹಾಳಾದ ರೈತರ ಬೆಳಗಳಿಗೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ಆ. 30ರಂದು ಬೆಳಗ್ಗೆ 11 ಗಂಟೆಗೆ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರೊಂದಿಗೆ ಪಟ್ಟಣದ ಸರ್ವಜ್ಞ ವೃತ್ತದದಿಂದ ತಹಸೀಲ್ದಾರ್ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಿ, ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ನಂತರ ಮಧ್ಯಾಹ್ನ 12 ಗಂಟೆಗೆ ದುರ್ಗಾದೇವಿ ದೇವಸ್ಥಾನದಲ್ಲಿ ದೇವಿಗೆ ಉಡಿ ತುಂಬುವುದು, ವಿಶೇಷ ಪೂಜೆ ಸಲ್ಲಿಸುವ ಮೂಲಕ ದುರ್ಗಾದೇವಿ ಕೆರೆಗೆ ಬಾಗಿನ ಸಮರ್ಪಣೆ, ನಂತರ ಅನ್ನ ಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts