More

    22ರಂದು ಡಿಸಿ ಕಚೇರಿ ಮುಂಭಾಗ ಬೃಹತ್ ಧರಣಿ

    ಶಿವಮೊಗ್ಗ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಲಾನುಭವಿಗಳಿಗೆ ಸಿಗುವ ಸೌಲಭ್ಯಗಳ ಸಹಾಯ ಧನ ಕಡಿತಗೊಳಿಸದಿರುವುದು ಸೇರಿ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.22ರ ಬೆಳಗ್ಗೆ 10ಕ್ಕೆ ಡಿಸಿ ಕಚೇರಿ ಎದುರು ಬೃಹತ್ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ವಿ.ವಿನೋದ್ ತಿಳಿಸಿದರು.

    ನೋಂದಾಯಿತ ಲಾನುಭವಿಗಳ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಯೋಜನೆಯಡಿ ನೀಡುತ್ತಿದ್ದ ಸಹಾಯಧನದಲ್ಲಿ ಶೇ.80ರಷ್ಟು ಕಡಿತಗೊಳಿಸಿರುವುದರಿಂದ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಹಾಗಾಗಿ ಸಹಾಯಧನ ಕಡಿತಗೊಳಿಸಿರುವ ಪ್ರಸ್ತುತ ಆದೇಶವನ್ನು ಸರ್ಕಾರ ರದ್ದುಪಡಿಸಿ ಕಳೆದ ವರ್ಷದಂತೆ ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಒಕ್ಕೂಟದ ಉಪಾಧ್ಯಕ್ಷ ಸುರೇಶ್, ಪ್ರಧಾನ ಕಾರ್ಯದರ್ಶಿ ಎ.ಶಶಿಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ನೇತ್ರಾವತಿ, ಸಂಧ್ಯಾ, ಪ್ರಮುಖರಾದ ಅವಿನಾಶ್, ಮುನಿಯಪ್ಪ, ಜಯಣ್ಣ, ಶಿವಕುಮಾರ್, ಶೇಖರ್ ಆನಂದ್ ಇದ್ದರು.

    ರಾಜ್ಯೋತ್ಸವ ರಸಪ್ರಶ್ನೆ - 22

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts