ಧರ್ಮರಕ್ಷಣೆಗಾಗಿ ಹಿಂದುಗಳು ಸರ್ವ ಸನ್ನದ್ಧ

protest
ವಿಶ್ವ ಹಿಂದು ಪರಿಷತ್ ಬಜರಂಗದಳ ಕುಂದಾಪುರ ಪ್ರಖಂಡದ ನೇತೃತ್ವದಲ್ಲಿ ಕುಂದಾಪುರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು
Published on

ವಿಜಯವಾಣಿ ಸುದ್ದಿಜಾಲ ಕುಂದಾಪುರ

ನಾಗಮಂಗಲದ ಗಲಾಭೆ ಪ್ರಕರಣವನ್ನು ರಾಜ್ಯ ಸರ್ಕಾರ ಮುಚ್ಚಿಹಾಕಲು ಹೊರಟಿದೆ. ಗೃಹಸಚಿವರು ಘಟನೆ ಬಗ್ಗೆ ಉಡಾಫೆಯಾಗಿ ಪ್ರತಿಕ್ರಿಯಿಸುತ್ತಿದ್ದು, ಮಾಧ್ಯಮಗಳನ್ನೂ ಹತ್ತಿಕ್ಕುವ ಪ್ರಯತ್ನವಾಗುತ್ತಿದೆ. ಧರ್ಮರಕ್ಷಣೆಗಾಗಿ ಹಿಂದುಗಳು ಸನ್ನದ್ಧರಾಗಿದ್ದೇವೆ ಎಂದು ವಿಶ್ವ ಹಿಂದು ಪರಿಷತ್ ಮುಖಂಡ ಸುಬ್ರಹ್ಮಣ್ಯ ಹೊಳ್ಳ ಹೇಳಿದರು.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಖಂಡಿಸಿ ವಿಶ್ವ ಹಿಂದು ಪರಿಷತ್ ಬಜರಂಗದಳ ಕುಂದಾಪುರ ಪ್ರಖಂಡದ ನೇತೃತ್ವದಲ್ಲಿ ಕುಂದಾಪುರದ ಶಾಸ್ತ್ರಿ ವೃತ್ತದಲ್ಲಿ ಗುರುವಾರ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.
ವಿಹಿಂಪ ತಾಲೂಕು ಅಧ್ಯಕ್ಷ ಸುಧೀರ್ ಮೆರ್ಡಿ, ಕಾರ್ಯದರ್ಶಿ ಪ್ರದೀಪ ಮಾರ್ಕೋಡು, ಬಿಎಂಎಸ್ ಜಿಲ್ಲಾಧ್ಯಕ್ಷ ಗಿರೀಶ್ ಕುಂದಾಪುರ, ಬಿಜೆಪಿ ಕುಂದಾಪುರ ಮಂಡಲದ ಮಾಜಿ ಅಧ್ಯಕ್ಷ ಶಂಕರ ಅಂಕದಕಟ್ಟೆ, ಶ್ರೀನಾಥ, ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್, ಕುಂದಾಪುರ ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ, ಸದಸ್ಯರಾದ ಸಂತೋಷ್ ಶೆಟ್ಟಿ, ಪ್ರಭಾಕರ, ಶೇಖರ ಪೂಜಾರಿ, ಪ್ರಕಾಶ್ ಖಾರ್ವಿ ಮೊದಲಾದವರು ಪಾಲ್ಗೊಂಡಿದ್ದರು.

ಇವತ್ತು ಹಿಂದುಗಳು ಧಾರ್ಮಿಕ ಆಚರಣೆ, ಮೆರವಣಿಗೆ ಮಾಡಲು ಅವಕಾಶವಿಲ್ಲದಾಗಿದೆ. ಒಂದೆಡೆ ದೇಶ ಒಡೆಯುವ ಕೆಲಸ ನಡೆಯುತ್ತಿದ್ದರೆ ಇನ್ನೊಂದೆಡೆ ಭಯೋತ್ಪಾದನೆ ಮೂಲಕ ಹಿಂದುಗಳ ಕೊಲೆಯಾಗುತ್ತಿವೆ.-ಸುರೇಂದ್ರ ಕೋಟೇಶ್ವರ, ವಿಹಿಂಪ ಜಿಲ್ಲಾ ಸಹಕಾರ್ಯದರ್ಶಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net