26.8 C
Bangalore
Friday, December 13, 2019

ಸರ್ಕಾರಿ ನೌಕರರಿಗೆ ವಿಶೇಷ ಭತ್ಯೆ ನಿಯಮಗಳು

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

| ಲ.ರಾಘವೇಂದ್ರ ಸೇವಾ ಕಾನೂನು ತಜ್ಞರು

ಸರ್ಕಾರವು ತನ್ನ ನೌಕರರಿಗೆ ಉತ್ತೇಜನ ನೀಡಲು ಅವರ ಶ್ರಮದಾಯಕ ಹುದ್ದೆ ಗಮನಿಸಿ ವಿಶೇಷ ಭತ್ಯೆ ನೀಡುತ್ತದೆ. ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿ ನಿಯಮ 8(42)ರಲ್ಲಿ ವಿಶೇಷ ಭತ್ಯೆಯನ್ನು ಪರಿಭಾಷಿಸಲಾಗಿದೆ. ಅದರಂತೆ ಈ ವಿಶೇಷ ಭತ್ಯೆಯನ್ನು ಕರ್ತವ್ಯಗಳ ವಿಶೇಷ ಶ್ರಮದಾಯಕ ಅಥವಾ ಕೆಲಸದಲ್ಲಿ ಅಥವಾ ಜವಾಬ್ದಾರಿಯಲ್ಲಿರುವ ಆದ ನಿರ್ದಿಷ್ಟ ಹೆಚ್ಚಳ ಅಥವಾ ಕೆಲಸ ಮಾಡುತ್ತಿರುವ ಪ್ರದೇಶದ ಅನಾರೋಗ್ಯ ವಾತಾವರಣ ಗಮನಿಸಿ ಮಂಜೂರು ಮಾಡಿದ ಒಂದು ಹುದ್ದೆಯ ಅಥವಾ ಒಬ್ಬ ಸರ್ಕಾರಿ ನೌಕರನ ಉಪಲಬ್ಧಿಗಳಲ್ಲಿ ಆದ ವೇತನದ ಸ್ವರೂಪದ ಒಂದು ಹೆಚ್ಚಳವೆಂದು ತಿಳಿಸಿದೆ.

ಈ ಹಿಂದೆ ಇದನ್ನು ವಿಶೇಷ ವೇತನವೆಂದು ಪರಿಭಾಷಿಸಲಾಗಿದ್ದು, ದಿನಾಂಕ 29.4.2000ರ ಸರ್ಕಾರಿ ಅಧಿಸೂಚನೆ ಸಂಖ್ಯೆ ಎಫ್​ಡಿ 7, ಎಸ್​ಆರ್​ಎ 99, ದಿನಾಂಕ 29.4.2000ರ ಮೇರೆಗೆ ವಿಶೇಷ ಭತ್ಯೆಯೆಂದು ಪುನರ್ ನಾಮಕರಣ ಮಾಡಲಾಗಿದೆ. ಈ ವಿಶೇಷ ವೇತನವನ್ನು ಈ ಹಿಂದೆ ಪದೋನ್ನತಿವರೆಗೂ ಮುಂದುವರಿಸಲಾಗುತ್ತಿತ್ತು. ಈ ಭತ್ಯೆಯನ್ನು ಶೀಘ್ರಲಿಪಿಗಾರರು, ಹಿರಿಯ ಶೀಘ್ರಲಿಪಿಗಾರರು, ಪತ್ರಾಂಕಿತ ಆಪ್ತ ಸಹಾಯಕರು ಮುಂತಾದವರಿಗೆ ನೀಡಲಾಗುತ್ತಿತ್ತು. ಅಲ್ಲದೆ ಮಾನ್ಯ ಸಚಿವರ ಸರ್ಕಾರದ ಮುಖ್ಯಕಾರ್ಯದರ್ಶಿ, ಅಪರ ಮುಖ್ಯಕಾರ್ಯದರ್ಶಿ ಹಾಗೂ ಉನ್ನತ ಅಧಿಕಾರಿಗಳ ಇಲಾಖಾ ಮುಖ್ಯಸ್ಥರ ಆಪ್ತ ಶಾಖೆಗಳಲ್ಲಿ ಕೆಲಸಮಾಡುತ್ತಿರುವ ಸರ್ಕಾರಿ ನೌಕರರಿಗೆ ದಿನಾಂಕ 14.6.2012ರ ಎಫ್​ಡಿ 12, ಎಸ್​ಆರ್​ಪಿ 2012(ಐಗಿ ) ಮೇರೆಗೆ ಪರಿಷ್ಕೃತ ವಿಶೇಷ ಭತ್ಯೆಯನ್ನು ದಿನಾಂಕ 1.4.2012ರಿಂದ ಜಾರಿಗೆ ಬರುವಂತೆ ಮಂಜೂರು ಮಾಡಲಾಗಿದೆ. ಈ ವಿಶೇಷ ಭತ್ಯೆಯನ್ನು ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಹೊರತುಪಡಿಸಿದ ಇನ್ನಿತರ ಹುದ್ದೆಗಳಲ್ಲಿ ಇರುವವರಿಗೆ ಒಂದಕ್ಕಿಂತ ಹೆಚ್ಚು ಈ ವಿಶೇಷ ಭತ್ಯೆ ಮಂಜೂರು ಮಾಡಬಾರದೆಂದು ಇದೇ ಆದೇಶದಲ್ಲಿ ಸೂಚಿಸಲಾಗಿದೆ.

ಈ ಹಿಂದೆ ಶೀಘ್ರಲಿಪಿಗಾರ, ಬೆರಳಚ್ಚುಗಾರ, ವಾಹನಚಾಲಕರಿಗೆ ಈ ವಿಶೇಷ ಭತ್ಯೆಯನ್ನು ನಿವೃತ್ತಿ ಹೊಂದುವವರೆಗೂ ನೀಡಲಾಗುತ್ತಿತ್ತು ಮತ್ತು ಅದನ್ನು ಪದೋನ್ನತಿ ಹೊಂದಿದಾಗ ಮುಂದಿನ ವೇತನ ಬಡ್ತಿಯೊಂದಿಗೆ ವಿಲೀನಗೊಳಿಸಲಾಗುತ್ತಿತ್ತು ಹಾಗೂ ನಿವೃತ್ತಿ ಹೊಂದಿದಾಗ ನಿವೃತ್ತಿ ವೇತನಕ್ಕೆ ಉಪಲಬ್ಧಿಯೆಂದು ಪರಿಗಣಿಸಲಾಗುತ್ತಿತ್ತು. ಆದರೆ ದಿನಾಂಕ 1.4.1998ರಿಂದ ಇದನ್ನು ರದ್ದುಪಡಿಸಲಾಗಿದೆ.

5ನೇ ವೇತನ ಆಯೋಗದ ಮಧ್ಯಂತರ ವರದಿಯ ಶಿಫಾರಸ್ಸಿನ ಮೇರೆಗೆ ದಿನಾಂಕ 29.3.2006ರ ಸರ್ಕಾರಿ ಆದೇಶ ಸಂಖ್ಯೆ ಎಫ್​ಡಿ 8, ಎಸ್​ಆರ್​ಪಿ 6ರ ಮೇರೆಗೆ ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಪ್ರಾಥಮಿಕ ಶಾಲಾ ಶಿಕ್ಷಕರು ಸೇರಿದಂತೆ ಎಲ್ಲ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮಾಸಿಕ 200 ರೂ. ರಷ್ಟು ವಿಶೇಷ ಭತ್ಯೆ ಮಂಜೂರು ಮಾಡಲಾಗಿತ್ತು. ಅಂತೆಯೇ ದಿನಾಂಕ 12.5.2007ರ ಸರ್ಕಾರಿ ಆದೇಶ ಸಂಖ್ಯೆ ಎಫ್​ಡಿ 14, ಎಸ್​ಆರ್​ಪಿ 6ರ ಮೇರೆಗೆ ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಪ್ರೌಢಶಾಲಾ ಶಿಕ್ಷಕರು ಸೇರಿ ಎಲ್ಲ ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಮಾಸಿಕ 200 ರೂ. ನಷ್ಟು ವಿಶೇಷ ಭತ್ಯೆ ಮಂಜೂರು ಮಾಡಲಾಗಿತ್ತು. ಆದರೆ ದಿನಾಂಕ 28.82008ರ ಸರ್ಕಾರಿ ಆದೇಶ ಸಂಖ್ಯೆ ಎಫ್​ಡಿ 31, ಎಸ್​ಆರ್​ಪಿ 2007ರಂತೆ ದಿನಾಂಕ 1.8.2008ರಂದು ಅಥವಾ ನಂತರ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕಾತಿ ಹೊಂದಿದವರು ಈ ವಿಶೇಷ ಭತ್ಯೆ ಪಡೆಯಲು ಅರ್ಹರಾಗಿರುವುದಿಲ್ಲ ಎಂದು ತಿಳಿಸಲಾಗಿದೆ. ಅದೇ ರೀತಿಯಾಗಿ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಪದೋನ್ನತಿ ಹೊಂದಿದವರೂ ಈ ವಿಶೇಷ ಭತ್ಯೆ ಪಡೆಯಲು ಅರ್ಹರಾಗಿರುವುದಿಲ್ಲ. ದಿನಾಂಕ 27.10.2016ರ ಸರ್ಕಾರಿ ಆದೇಶ ಸಂಖ್ಯೆ ಇಡಿ 290. ಪಿಬಿಎಸ್ 2016ರ ಮೇರೆಗೆ ದಿನಾಂಕ 1.8.2000ದರ ಪೂರ್ವದಲ್ಲಿ ನೇಮಕ ಹೊಂದಿದ ಶಿಕ್ಷಕರ ವಿಶೇಷ ಭತ್ಯೆಯನ್ನು 450 ರೂ.ಗೆ ಹೆಚ್ಚಿಸಲಾಗಿದೆ. ಅಲ್ಲದೆ ಈ ವಿಶೇಷ ಭತ್ಯೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಉಪನ್ಯಾಸಕರಿಗೂ ವಿಸ್ತರಿಸಲಾಗಿದೆ.

6ನೇ ವೇತನ ಆಯೋಗ ವರದಿಯ ಶಿಫಾರಸ್ಸಿನಂತೆ ಸರ್ಕಾರವು ದಿನಾಂಕ 19.4.2018ರ ಆದೇಶ ಸಂಖ್ಯೆ ಎಫ್​ಡಿ 6, ಎಸ್​ಆರ್​ಪಿ 2018ರ ಮೇರೆಗೆ ಪರಿಷ್ಕೃತ ವೇತನ ಶ್ರೇಣಿಗಳನ್ನು ಜಾರಿಗೆ ತರುತ್ತ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜು ಉಪನ್ಯಾಸಕರ ಪ್ರಾರಂಭಿಕ ವೇತನವನ್ನು ಸಂವಾದಿ ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿಗದಿಪಡಿಸುವಾಗ ಇವರು ಪಡೆಯುತ್ತಿರುವ ವಿಶೇಷ ವೇತನವನ್ನು ಮೂಲವೇತನಕ್ಕೆ ಸೇರಿಸಿ ಲಭ್ಯವಾಗಬಹುದಾದ ಪ್ರಸ್ತುತ ಪರಿಷ್ಕೃತ ಮೂಲ ವೇತನವನ್ನು ದಿನಾಂಕ 1.7.2017ರಿಂದ ಜಾರಿಗೆ ಬರುವಂತೆ ನಿಗದಿಪಡಿಸಲು ಸೂಚಿಸಿದೆ. ಹೀಗೆ ವಿಶೇಷ ವೇತನಗಳು ಸರ್ಕಾರಿ ಸೇವೆಯಲ್ಲಿ ಹಲವಿದ್ದು ಕೆಲವು ಶಾಲಾ ಶಿಕ್ಷಕರಿಗೆ ತಪ್ಪಾಗಿ ಅಳವಡಿಕೆಯಾಗಿದ್ದಲ್ಲಿ ಅದನ್ನು ಪುನರ್ ಪರಿಶೀಲಿಸಲು ಸಹ ಸೂಚಿಸಲಾಗಿದೆ.

ಇತ್ತೀಚೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಜ್ಞಾಪನಪತ್ರವೊಂದನ್ನು ಹೊರಡಿಸಿ 2008ಕ್ಕಿಂತ ಹಿಂದೆ ನೇಮಕಗೊಂಡ ಮತ್ತು ಬಡ್ತಿ ಹೊಂದಿದ ಪ್ರೌಢಶಾಲಾ ಶಿಕ್ಷಕರ ವಿಶೇಷ ಭತ್ಯೆ ಕಡಿತ ಮಾಡಬಾರದು ಹಾಗೂ ವೇತನ ತಡೆಹಿಡಿಯಬಾರದೆಂದು ಸೂಚಿಸಿದ್ದಾರೆ. ಹೀಗಾಗಿ ವಿಶೇಷ ಭತ್ಯೆ ಒಂದು ರೀತಿಯಲ್ಲಿ ಶಿಕ್ಷಕರಿಗೆ ಹೆಚ್ಚುವರಿಯಾಗಿ ಲಭ್ಯವಾಗುವ ಶ್ರಮದಾಯಕ ವೇತನವಾಗಿರುತ್ತದೆ.

(ಮುಂದುವರಿಯುವುದು) (ಪ್ರತಿಕ್ರಿಯಿಸಿ : [email protected])

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....