23.2 C
Bangalore
Saturday, December 14, 2019

ಎಲ್ಲ ತಾಲೂಕುಗಳಿಗೆ ಮತ್ಸೃದರ್ಶಿನಿ ಕ್ಯಾಂಟೀನ್: ಸಚಿವ ಕೋಟ

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ಮಂಗಳೂರು: ಕಡಲ ಮೀನುಗಳ ರುಚಿ ಎಲ್ಲರಿಗೂ ಸಿಗಬೇಕು ಎಂಬ ಆಶಯ ಹಾಗೂ ಎಲ್ಲ ತಾಲೂಕುಗಳಲ್ಲೂ ಕಡಿಮೆ ದರದಲ್ಲಿ ಮೀನಿನ ಖಾದ್ಯ ಸಿಗಬೇಕು ಎಂಬ ಉದ್ದೇಶದಿಂದ ಮತ್ಸ್ಯದರ್ಶಿನಿ ಕ್ಯಾಂಟೀನ್ ಯೋಜನೆಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಮೀನುಗಾರಿಕೆ ಹಾಗೂ ಬಂದರು ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ೆಡರೇಶನ್ ಮಂಗಳೂರು ಆಶ್ರಯದಲ್ಲಿ ಪಾಂಡೇಶ್ವರ ರಮಾ ಲಕ್ಷ್ಮೀನಾರಾಯಣ ಸಭಾಭವನದಲ್ಲಿ ಗುರುವಾರ ಸನ್ಮಾನ ಸ್ವೀಕರಿಸಿದ ಅವರು, ರಾಜ್ಯದ ಕೆಲವೆಡೆ ಜಾರಿಯಲ್ಲಿರುವ ‘ಮತ್ಸ್ಯದರ್ಶಿನಿ ಕ್ಯಾಂಟೀನ್’ ಯೋಜನೆಯನ್ನು ರಾಜ್ಯದ ಎಲ್ಲ ತಾಲೂಕುಗಳಿಗೂ ವಿಸ್ತರಿಸಲಾಗುವುದು ಎಂದರು.

ಇಲ್ಲಿಯವರೆಗೆ ಮೀನುಗಾರಿಕೆ ಇಲಾಖೆಯನ್ನು ಸಚಿವರು, ಅಧಿಕಾರಿಗಳು, ಇಲಾಖೆ ನಡೆಸುತ್ತಿತ್ತು. ಇನ್ನು ಮೀನುಗಾರರೇ ನಡೆಸಬೇಕು. ಇದಕ್ಕಾಗಿ ಮೀನುಗಾರರ ಆಗ್ರಹ-ಬೇಡಿಕೆಗಳನ್ನು ಈಡೇರಿಸುವ ನೆಲೆಯಲ್ಲಿ ವಿಶೇಷ ಆದ್ಯತೆ ನೀಡಲಾಗುವುದು. ನಾಡದೋಣಿ ಮೀನುಗಾರರಿಗೆ 180 ಲೀ. ಸದ್ಯ ಸಿಗುತ್ತಿರುವ ಸೀಮೆಎಣ್ಣೆ ಪ್ರಮಾಣವನ್ನು 300 ಲೀ.ಗೆ ಏರಿಸಬೇಕು ಎಂಬ ಮನವಿ ಬಂದಿದ್ದು, ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು. ಮೀನುಗಾರಿಕಾ ಬೋರ್ಡ್‌ಗೆ ಮೀನುಗಾರ ಶಾಸಕರನ್ನು ನೇಮಿಸಲಾಗುವುದು ಎಂದರು.

ೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಎ.ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಹಕಾರ ಇಲಾಖೆ ಉಪನಿಬಂಧಕ ಬಿ.ಕೆ.ಸಲೀಂ, ಪ್ರಮುಖರಾದ ಪ್ರವೀಣ್ ನಾಕ್, ನಿತಿನ್ ಕುಮಾರ್, ಶಿವಕುಮಾರ್, ಮೋಹನ್ ಬೆಂಗ್ರೆ, ಗಣೇಶ್ ಕೆ, ಸುಶ್ಮಿತಾ, ಕಿಶೋರ್, ೆಡರೇಶನ್‌ನ ಆಡಳಿತ ಮಂಡಳಿ ಪ್ರಮುಖರು ಉಪಸ್ಥಿತರಿದ್ದರು.

ಸಹಕಾರಿ ಸಾಲಮನ್ನಾ ಸಿಎಂ ಜತೆಗೆ ಸಭೆ: ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ಕ್ಷಣದಲ್ಲಿಯೇ ಮೀನುಗಾರರ ಸಾಲಮನ್ನಾ ಯೋಜನೆ ಪ್ರಕಟಿಸಿದ್ದರು. ಇದು ವಾಣಿಜ್ಯ ಬ್ಯಾಂಕ್‌ಗಳಿಗೆ ಮಾತ್ರ ಎಂದಿತ್ತು. ಸಹಕಾರಿ ಸಾಲದಲ್ಲಿಯೂ ಮೀನುಗಾರರ ಮನ್ನಾ ಜಾರಿಗೊಳಿಸುವಂತೆ ಬೇಡಿಕೆ ಬಂದಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಜತೆಗೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಹೇಳಿದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...