

ಬೆಂಗಳೂರು: ಮಠ, ಎದ್ದೇಳು ಮಂಜುನಾಥ ಸಿನಿಮಾವನ್ನು ನಿರ್ದೇಶಿಸಿ ಸ್ಯಾಂಡಲ್ವುಡ್ನ;ಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದ ನಿರ್ದೇಶಕ ಗುರುಪ್ರಸಾದ್ (Guruprasad) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರು ಹೊರವಲದ ಮಾದಾವರದ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿದ್ದ ಗುರುಪ್ರಸಾದ್ ಅವರು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮಾದನಾಯಕನಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಇವರ ನಿರ್ದೇಶನದ ರಂಗನಾಯಕ ಚಿತ್ರ ರಿಲೀಸ್ ಆಗಿತ್ತು. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದ ಈ ಚಿತ್ರವು ಬಾಕ್ಸ್ಆಫೀಸ್ನಲ್ಲಿ ಹೀನಾಯವಾಗಿ ಸೋಲುಂಡಿತ್ತು. ಸಾಲಬಾಧೆ ತಾಳಲಾರದೆ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ಇನ್ನಷ್ಟೇ ಅಧಿಕೃತವಾಗಬೇಕಿದೆ.