25.5 C
Bangalore
Monday, December 16, 2019

ಮಾತೃಹೃದಯಿ ಮಲ್ಲಿಕಾರ್ಜುನ ಶ್ರೀಗಳು

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

|ಗಣೇಶ.ಎಂ.ಗಾಣಿಗ ಘಟಪ್ರಭಾ
ಘಟಪ್ರಭೆ ನದಿ ದಡದಲ್ಲಿರುವ ಸುಮಾರು 9 ದಶಕಗಳ ಇತಿಹಾಸ ಹೊಂದಿರುವ ಹಲವು ಪವಾಡಗಳ ಕೇಂದ್ರವಾಗಿರುವ ಸುಕ್ಷೇತ್ರ ಶ್ರೀ ಗುಬ್ಬಲಗುಡ್ಡ ಕೆಂಪಯ್ಯಸ್ವಾಮಿ ಮಠ ಆಧ್ಯಾತ್ಮಿಕ ನೆಲೆಯಾಗಿದೆ. 25 ವರ್ಷಗಳಿಂದ ಗುರುವಿಲ್ಲದೆ ಕೊರಗಿದ ಘಟಪ್ರಭಾ ಜನತೆ ಹಾಗೂ ಗುಬ್ಬಲಗುಡ್ಡ ಮಠಕ್ಕೆ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಆಗಮಿಸಿದ ನಂತರ ಇಲ್ಲಿನ ಜನರ ಭಾಗ್ಯದ ಬಾಗಿಲು ತೆರೆದಂತಾಗಿದೆ. ಲಿಂಗೈಕ್ಯ ಜಗದ್ಗುರು ಡಾ. ಗಂಗಾಧರ ಮಹಾಸ್ವಾಮಿಗಳು 2003ರಲ್ಲಿ ಮಲ್ಲಿಕಾರ್ಜುನ ಮಹಾಸ್ವಾಮಿಗಳನ್ನು ಉತ್ತಾರಾಕಾರಿಯನ್ನಾಗಿ ನೇಮಿಸಿದರು. ಮಲ್ಲಿಕಾರ್ಜುನ ಮಹಾಸ್ವಾಮಿಗಳು ತಮ್ಮ ವಿದ್ಯಾಭ್ಯಾಸ ಮುಗಿಸಿಕೊಂಡು 2010ರಲ್ಲಿ ಕೆಂಪಯ್ಯಸ್ವಾಮಿ ಮಠಕ್ಕೆ ಬಂದು ಅನಾಥವಾಗಿದ್ದ ಮಠದ ಜವಾಬ್ದಾರಿ ತೆಗೆದುಕೊಂಡ ನಂತರ 7 ವರ್ಷಗಳಿಂದ ಮಠದ ಸಂಪೂರ್ಣ ಚಿತ್ರಣ ಬದಲಾಗಿದೆ.

- Advertisement -

ಮಲ್ಲಿಕಾರ್ಜುನ ಸ್ವಾಮೀಜಿಗಳು ಮಾತೃ ಹೃದಯಿಗಳು, ಭಕ್ತವೃಂದದ ಆರಾಧ್ಯರು. ಅಲ್ಪ ಅವಯಲ್ಲಿ ತಮ್ಮ ಕಾಯಕದಿಂದಲೇ ಘಟಪ್ರಭಾ ಜನರ ಮನಸ್ಸಿನಲ್ಲಿ ನೆಲೆ ನಿಂತಿರುವವರು. ಅವರ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಗಳಿಗಾಗಿ ಬೃಹತ್ ಪೀಠವಾಗಿರುವ ಗದಗ ಜಗದ್ಗುರು ಮುಂಡರಗಿ ಅನ್ನದಾನೇಶ್ವರ ಸಂಸ್ಥಾನ ಮಠದ ಉತ್ತರಾಕಾರಿ ಪೀಠ ಒದಗಿ ಬಂದಿದೆ. ಶಿರಢಾಣದಲ್ಲಿರುವ ಮೂರು ಸಾವಿರ ಮಠದ ಡಾ. ಗಂಗಾಧರ ಆಂಗ್ಲ ಮಾಧ್ಯಮ ವಸತಿ ಶಾಲೆಯ ಚೇರ್ಮನ್ ಆಗಿ ಆಯ್ಕೆಯಾದ ನಾಲ್ಕೇ ವರ್ಷದಲ್ಲಿ ಶಾಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ. ಉತ್ತಮ ಶಿಕ್ಷಣವನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಒದಗಿಸುತ್ತಿದ್ದಾರೆ. ಹಾನಗಲ್ಲ ಕುಮಾರ ಶಿವಯೋಗಿಗಳ ಆರಾಧಕರಾಗಿರುವ ಶ್ರೀಗಳು, ಕುಮಾರೇಶ್ವರ ಜಯಂತಿ ಆಚರಣೆ ಸಮಿತಿ ಸಂಸ್ಥಾಪಕ ಅಧ್ಯಕ್ಷರಾಗಿ ಈಗ ಪ್ರತಿ ವರ್ಷ ನಾಡಿನ ಎಲ್ಲ ಕಡೆ ಕುಮಾರೇಶ್ವರ ಜಯಂತ್ಯುತ್ಸವವನ್ನು ಎಲ್ಲರ ಜತೆಗೂಡಿ ಅದ್ದೂರಿಯಾಗಿ ಆಚರಿಸುತ್ತಿದ್ದಾರೆ.

ಮಲ್ಲಿಕಾರ್ಜುನ ಮಹಾಸ್ವಾಮಿಗಳು ಲಿಂ.ಹಾನಗಲ್ಲ ಕುಮಾರ ಶಿವಯೋಗಿಗಳು ಸ್ಥಾಪಿಸಿದ ಶಿವಯೋಗ ಮಂದಿರದಲ್ಲಿ ಪ್ರಾಥಮಿಕ ಶಿಕ್ಷಣದೊಂದಿಗೆ ಯೋಗ, ಶಿವಯೋಗ, ಸಂಸ್ಕೃತ, ವಚನ, ವೇದ, ಜ್ಯೋತಿಷ್ಯ, ಸಂಗೀತ ವಿದ್ಯೆಗಳಲ್ಲಿ ಪರಿಣತರಾದರು. ಕಾಲೇಜು ಶಿಕ್ಷಣವನ್ನು ಮುಂಡರಗಿ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದಲ್ಲಿದ್ದುಕೊಂಡು ಪೂರೈಸಿದರು. ಹುಬ್ಬಳ್ಳಿ ಜಗದ್ಗುರು ಮೂರುಸಾವಿರಮಠದ ಶ್ರೀ ಕುಮಾರೇಶ್ವರ ಶಿವಯೋಗಿ ಸಂಘದ ಸಾಧಕರಾಗಿ, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ತತ್ತ್ವಶಾಸ ವಿಷಯದಲ್ಲಿ ಸುವರ್ಣ ಪದಕದೊಂದಿಗೆ ಸ್ನಾತಕೋತ್ತರ ಪದವಿ ಪಡೆದರು. ನಿರಂತರ ಅಧ್ಯಯನ ಮುಂದುವರಿಸಿ ಬಾಗಲಕೋಟೆಯ ಚರಂತಿಮಠದಲ್ಲಿದ್ದುಕೊಂಡು ಶ್ರೀ ಬಸವೇಶ್ವರ ಕಾಲೇಜನಲ್ಲಿ ಎಂ.ಎ ಕನ್ನಡ ಪದವಿ ಪೂರೈಸಿ ಈಗ ಡಾಕ್ಟರೇಟ್ ಪದವಿಗಾಗಿ ಅಧ್ಯಯನ ಮಾಡುತ್ತಿದ್ದಾರೆ. ಕಳೆದ ಏಳು ವರ್ಷದಿಂದ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ನಡೆಯುವ ಜಾತ್ರೆ, ಪ್ರವಚನ, ದನಗಳ ಜಾತ್ರೆ, ಆಧ್ಯಾತ್ಮಿಕ ಚಿಂತನದಲ್ಲಿ ಊರಿನ ಜನರೆಲ್ಲ ಸೇರಿ ಅದ್ದೂರಿಯಾಗಿ ಆಚರಿಸುವ ಮೂಲಕ ಗತ ವೈಭವ ನೆನಪಿಸಿಕೊಳ್ಳುತ್ತಿದ್ದಾರೆ. ಮಠದ ವತಿಯಿಂದ ಕಳೆದ ನಾಲ್ಕು ವರ್ಷಗಳಿಂದ ರಾಷ್ಟ್ರ ಮಟ್ಟದಲ್ಲಿ ಹಾನಗಲ್ಲ ಶ್ರೀ ಕುಮಾರೇಶ್ವರರ ಹೆಸರಿನಲ್ಲಿ ಸುಕುಮಾರ ಶ್ರೀ ಪ್ರಶಸ್ತಿಯನ್ನು ಬೆಳ್ಳಿಯ ಭಿನ್ನವತ್ತಳೆಯೊಂದಿಗೆ ನೀಡುತ್ತಿದ್ದಾರೆ.

ಮಲ್ಲಿಕಾರ್ಜುನ ಸ್ವಾಮಿಗಳು ತಮ್ಮ 35 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಭಕ್ತರು ಗುರುಕಾಣಿಕೆಯಾಗಿ ರಕ್ತದಾನ ಮಾಡಿ ಗುರುವಿನ ಹೆಸರಿನಲ್ಲಿ ಇನ್ನೊಂದು ಜೀವವನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕಳೆದ ವರ್ಷ ನಡೆದ ರಕ್ತದಾನ ಶಿಬಿರದಲ್ಲಿ 280 ಜನರು ರಕ್ತದಾನ ಮಾಡಿದ್ದರು. ಆ.4ರಂದು ನಡೆಯಬೇಕಿದ್ದ ಶ್ರೀಗಳ ಜನ್ಮದಿನ ಆಚರಣೆ ಸಮಾರಂಭವನ್ನು ನೆರೆ ಹಾವಳಿ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಸೆ.23ರಂದು ಮಲ್ಲಿಕಾರ್ಜುನ ಮಹಾಸ್ವಾಮಿಗಳ ಜನ್ಮದಿನ, ಗುರುವಂದನೆ ನಿಮಿತ್ತ 8ನೇ ಬಾರಿಗೆ ಮೃತ್ಯುಂಜಯ ಸಾಂಸ್ಕೃತಿಕ ಭವನದಲ್ಲಿ ಬೆಳಗ್ಗೆ 8 ಗಂಟೆಗೆ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...