ವಿಜಯವಾಣಿ ಸುದ್ದಿಜಾಲ ಧಾರವಾಡ
ಕಬ್ಬಿಣ ಕಡಲೆಯಾದ ಗಣಿತ ವಿಷಯವನ್ನು ಮಕ್ಕಳಿಗೆ ಸರಳೀಕರಿಸಿ ಹೇಳುವ ಪ್ರಯತ್ನ ಮಾಡಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಪಿ. ಸುರೇಶ ಹೇಳಿದರು.
ನಗರದ ಸಿ.ವಿ. ರಾಮನ್ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಗಣಿತ ಉಪನ್ಯಾಸಕರ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಗಣಿತ ಉಪನ್ಯಾಸಕರ ವೇದಿಕೆ ಅಧ್ಯಕ್ಷ ಎಸ್.ಆರ್. ವಿಘ್ನೇಶಿ ಮಾತನಾಡಿ, ಇಂದಿನ ಮಕ್ಕಳಲ್ಲಿ ಗುಣಾತ್ಮಕ ಬೆಳವಣಿಗೆಗೆ ಎಲ್ಲ ಗಣಿತ ಉಪನ್ಯಾಕರು ಆಸಕ್ತಿಯಿಂದ ಪಾಠ ಮಾಡಬೇಕು. ಈ ಶೈಕ್ಷಣಿಕ ವರ್ಷದ ಫಲಿತಾಂಶವನ್ನು ಅತ್ಯುತ್ತಮವಾಗಿಸಲು ಎಲ್ಲ ಉಪನ್ಯಾಸಕರು ಕೈ ಜೋಡಿಸಬೇಕು ಎಂದರು.
ಆರ್.ಬಿ. ಚವ್ಹಾಣ ಅವರು ದ್ವೀತಿಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಕುರಿತು ಮಾತನಾಡಿದರು. ಎಂ.ಎಲ್. ಪಾಟೀಲ ಗಣಿತ ವಿಷಯ ಕುರಿತು ಉಪನ್ಯಾಸ ನೀಡಿದರು.
ಎ.ಎ. ಅತ್ತಾರ್, ಕಾಲೇಜಿನ ಸಂಸ್ಥಾಪಕ ಗಿರೀಶ ಹಾದಿಮನಿ, ಕಾಲೇಜಿನ ಗಣಿತ ಉಪನ್ಯಾಸಕರು, ಶಿಕ್ಷಕರು, ಇತರರು ಇದ್ದರು.
ಅನುರಾಧಾ ಆರಾಧ್ಯಮಠ ಸ್ವಾಗತಿಸಿದರು. ಮಾರುತಿ ಕದಂ ವಂದಿಸಿದರು.
ಗಣಿತ ಉಪನ್ಯಾಸಕರ ಕಾರ್ಯಾಗಾರ

You Might Also Like
ಈ ಆರೋಗ್ಯ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ತುಪ್ಪವನ್ನು ತಿನ್ನಲೇ ಬಾರದು ಗೊತ್ತಾ? ghee benefits and risks
ಬೆಂಗಳೂರು: ( ghee benefits and risks) ಹಾಲಿನ ಉತ್ಪನ್ನಗಳು ಆರೋಗ್ಯಕ್ಕೆ ಒಳ್ಳೆಯದು. ತುಪ್ಪ ಹಲವು…
ಬಿಸಿಲಿನ ವಾತಾವರಣದಲ್ಲಿ ನಿಮ್ಮ ಕಾರಿನೊಳಗೆ ತಂಪಾಗಿರಲು ಬಯಸುವಿರಾ? ಈ ಟ್ರಿಕ್ ಟ್ರೈ ಮಾಡಿ.. Summer Car Tips
ಬೆಂಗಳೂರು: (Summer Car Tips ) ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲಿಇಂದ ರಕ್ಷಣೆ ಪಡೆಯಲು…
ಹಠಾತ್ತನೆ ಮದ್ಯಪಾನ ತ್ಯಜಿಸುವುದರಿಂದ ಸಾಯ್ತಾರಾ? ಆಲ್ಕೋಹಾಲ್ ಬಿಡುವುದಾದ್ರೂ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… | Alcohol
Alcohol: ಮದ್ಯಪಾನದಿಂದ ಉಂಟಾಗುವ ಸಾವುಗಳ ಕುರಿತು ಬ್ರಿಟನ್ನ ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿ(ONS) ಅಘತಕಾರಿ ಅಂಕಿ…