More

    ಫೆಡರೇಶನ್‌ನಿಂದ ಮತ್ಸ್ಯ ಕ್ಯಾಂಟೀನ್ ಯಶ್‌ಪಾಲ್ ಸುವರ್ಣ ಮಾಹಿತಿ

    ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಆಯ್ದ ಕೇಂದ್ರಗಳಲ್ಲಿ ಮತ್ಸ್ಯ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಹೇಳಿದರು.

    ಮಂಗಳೂರಿನ ಮಂಗಳವಾರ ಪಾಂಡೇಶ್ವರದಲ್ಲಿ ಫೆಡರೇಶನ್‌ನ 2019-20ನೇ ಸಾಲಿನ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ಪರಿಣಾಮಕಾರಿಯಾಗಿ ಅನುಷ್ಠಾನದಿಂದ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ಒದಗಿಸುವ ಯೋಜನೆ ರೂಪಿಸಲಾಗಿದೆ. ಫೆಡರೇಶನ್‌ನಿಂದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಮೀನುಗಾರಿಕಾ ಕಾಲೇಜಿನಲ್ಲಿ ಮೀನುಗಾರಿಕೆ ವ್ಯಾಸಂಗ ಮಕ್ಕಳ ದತ್ತು ಸ್ವೀಕಾರ, ಸದಸ್ಯರಿಗೆ ಆರೋಗ್ಯ ಕಾರ್ಡು ಸೌಲಭ್ಯ, ಸದಸ್ಯ ಸಹಕಾರಿ ಸಂಘಗಳ ಪ್ರತಿನಿಧಿಗಳಿಗೆ ತರಬೇತಿ, ಮತ್ಸ್ಯಮೇಳ, ಸದಸ್ಯರಿಗೆ ಫೆಡರೇಶನ್ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರ, ಕಾಪು ಮತ್ತು ಹಂಗಾರಕಟ್ಟಾ ಕೇಂದ್ರಗಳಲ್ಲಿ ನೂತನವಾಗಿ ಬ್ಯಾಂಕಿಂಗ್ ವಿಭಾಗಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ.

    ಮಂಗಳೂರು ನಗರದ ಕೇಂದ್ರ ಭಾಗದಲ್ಲಿ ಸರ್ಕಾರದ ನಿವೇಶನದಲ್ಲಿ ಸುಸಜ್ಜಿತ ಪ್ರಧಾನ ಕಚೇರಿ ಕಟ್ಟಡವನ್ನು ನಿರ್ಮಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ನಿತಿನ್ ಕುಮಾರ್ ಮತ್ತು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯೋಗೀಶ್ ಕಾಂಚನ್ ಬೈಕಂಪಾಡಿ ಹಾಗೂ ನಿವೃತ್ತ ಸಿಬ್ಬಂದಿ ಜನಾರ್ದನ್ ಮತ್ತು ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು. ಉಪಾಧ್ಯಕ್ಷ ಪುರುಷೋತ್ತಮ ಅಮೀನ್, ವ್ಯವಸ್ಥಾಪಕ ನಿರ್ದೇಶಕ ಹರೀಶ್ ಕುಮಾರ್, ಮೀನುಗಾರಿಕಾ ಇಲಾಖೆ ಉಪನಿರ್ದೇಶಕ ಪಾರ್ಶ್ವನಾಥ್, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts