ತರಗತಿಯ ಜ್ಞಾನ ದೈನಂದಿನ ಜೀವನದಲ್ಲಿ ಅಳವಡಿಕೆ : ಪ್ರಾಂಶುಪಾಲೆ ಜಯಂತಿ ಸಲಹೆ

New Project (37)
Published on

ಕಡಬ: ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಕೌಶಲ ಬೆಳೆಸುವ ಉದ್ದೇಶದಿಂದ ಮೆಟ್ರಿಕ್ ಮೇಳ ಹಮ್ಮಿಕೊಳ್ಳಲಾಗಿದ್ದು, ಮಕ್ಕಳಲ್ಲಿ ವ್ಯವಹಾರಿಕ ಜ್ಞಾನ, ತರಗತಿಯಲ್ಲಿ ಪಡೆದ ಜ್ಞಾನವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾಣಿಯೂರು ಸರ್ಕಾರಿ ಪ.ಪೂ. ಕಾಲೇಜು ಪ್ರಾಂಶುಪಾಲೆ ಜಯಂತಿ ಹೇಳಿದರು.

ಕಾಣಿಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮೆಟ್ರಿಕ್ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಾಣಿಯೂರು ಗ್ರಾಪಂ ಸದಸ್ಯ ರಾಮಣ್ಣ ಗೌಡ ಮುಗರಂಜ, ಕಾಣಿಯೂರು ಕ್ಲಸ್ಟರ್ ಸಿಆರ್‌ಪಿ ಯಶೋದಾ, ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಏಲಡ್ಕ ಶಿರಾಡಿ ರಾಜನ್ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಎಲುವೆ, ಎಸ್‌ಡಿಎಂಸಿ ಸದಸ್ಯರು, ಪಾಲಕರು, ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಬಾಲಕೃಷ್ಣ ಕೆ.ನಿರೂಪಿಸಿದರು. ಶಿಕ್ಷಕಿ ದೇವಕಿ ವಂದಿಸಿದರು.

ತಮಗಿಷ್ಟವಾದ ವಸ್ತು ಖರೀದಿ

ವಿದ್ಯಾರ್ಥಿಗಳು ತಾವು ಮನೆಯಿಂದ ತಂದಿರುವ ಚೀನಿ ಕಾಯಿ, ಬೆಂಡೆಕಾಯಿ, ತೊಂಡೆಕಾಯಿ, ಕುಂಬಳಕಾಯಿ, ಪಡುವಲಕಾಯಿ, ಬಾಳೆಹಣ್ಣು, ಹರಿವೆ ಸೊಪ್ಪು, ಹಸಿಮೆಣಸು, ಸಿಹಿಗೆಣಸು, ಬಸಳೆ, ಎಳನೀರು, ವೀಳ್ಯದೆಲೆ, ತೆಂಗಿನಕಾಯಿ, ಸೀಬೆಕಾಯಿ, ಡ್ರೈಫ್ರುಟ್ಸ್, ಹಲಸಿನ ಕಾಯಿ, ರಂಗಿಹಣ್ಣು, ಚಿಕ್ಕು, ಪಪ್ಪಾಯಿ, ಕಲ್ಲಂಗಡಿ, ಔಷಧೀಯ ಸಸ್ಯ, ಹೂವಿನ ಗಿಡ, ಲಿಂಬೆ, ತಾಜಾ ಹಣ್ಣಿನ ರಸ, ತರಕಾರಿ, ಹಣ್ಣಿನ ಗಿಡ, ಮೆಣಸು ಗಿಡ, ಹಿಡಿಸೂಡಿ, ಮನೆಯಲ್ಲಿ ತಯಾರಿಸಿದ ತಿಂಡಿ, ಉಪ್ಪಿನಕಾಯಿ ಸಂತೆಯಲ್ಲಿ ಲಭ್ಯವಿದ್ದವು. ಶಿಕ್ಷಕರು, ಪಾಲಕರು, ಸಾರ್ವಜನಿಕರು ವಿದ್ಯಾರ್ಥಿಗಳೊಂದಿಗೆ ತಮಗಿಷ್ಟವಾದ ವಸ್ತು ಖರೀದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net