

ಉಪ್ಪಳ: ಕೊಂಡೆವೂರು ಸದ್ಗುರು ಶ್ರೀನಿತ್ಯಾನಂದ ವಿದ್ಯಾಪೀಠದಲ್ಲಿ ವಿವೇಕಾನಂದ ಜಯಂತಿ ಪ್ರಯುಕ್ತ ಮಾತೃ ಪೂಜನಾ-ಮಾತೃ ಭೋಜನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಮಂಗಲ್ಪಾಡಿ ಗ್ರಾಪಂ ಸಮಿತಿ ಸದಸ್ಯೆ ಸುಧಾ ಗಣೇಶ್ ಶುಭ ಹಾರೈಸಿದರು. ಶಾಲಾ ಆಡಳಿತ ಸಮಿತಿ ಸದಸ್ಯೆ ಜಯಲಕ್ಷ್ಮೀ ಕಾರಂತ್ ಅತಿಥಿಗಳಾಗಿದ್ದರು. ರಕ್ಷಕ-ಶಿಕ್ಷಕ ಸಂಘದ ಮಾತೃ ಸಮಿತಿ ಅಧ್ಯಕ್ಷೆ ಪ್ರೇಮಾ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲೆ ರೇಖಾ ಪ್ರದೀಪ್ ಮಾತೃಪೂಜನದ ಮಹತ್ವ ತಿಳಿಸಿದರು. ಶಾಲಾ ಆಡಳಿತ ಸಮಿತಿಯ ಸದಸ್ಯ ಸುಧಾಕರ್ ಮಾಸ್ತರ್ ಹಾಗೂ ಶಾಲಾ ಆಡಳಿತಾಧಿಕಾರಿ ಕಮಲಾಕ್ಷ ಮಾಸ್ತರ್ ಉಪಸ್ಥಿತರಿದ್ದರು.
ಶಿಕ್ಷಕ ಮನೋಜ್ ಹಾಗೂ ವಿದ್ಯಾರ್ಥಿನಿ ದ್ವಿತಿ ಎಂ. ವಿವೇಕಾನಂದ ಜಯಂತಿಯ ಕುರಿತು ತಿಳಿಸಿದರು. ವಿದ್ಯಾರ್ಥಿಗಳಿಂದ ವಿಶೇಷ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು. ಶಿಕ್ಷಕಿ ಸ್ವಾತಿ ಪ್ರದೀಪ್ ಸ್ವಾಗತಿಸಿದರು. ಅಶ್ವಿತಾ ವಂದಿಸಿದರು. ಸೌಮ್ಯಾ ಕಾರ್ಯಕ್ರಮ ನಿರೂಪಿಸಿದರು.