More

    ಪ್ರಭುದ್ಧತೆ ಪ್ರದರ್ಶಿಸಲು ಸೂಕ್ತ ವೇದಿಕೆ

    ಅರಕೇರಾ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಕ್ಕೆ ಸೂಕ್ತ ವೇದಿಕೆ ಪ್ರತಿಭಾ ಕಾರಂಜಿ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜ ಪೂಜಾರಿ ಹೇಳಿದರು.

    ಇದನ್ನೂ ಓದಿ: ಕೃಷಿ ವಿರೋಧಿ ನೀತಿ ಬದಲಾಗಲಿ

    ತಾಲೂಕಿನ ಬುದ್ದಿನ್ನಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಏರ್ಪಡಿಸಿದ್ದ ಮಲ್ಲೆದೇವರಗುಡ್ಡ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಾತನಾಡಿದರು.

    ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ವ್ಯಕ್ತಿತ್ವ ವಿಕಾಸನಕ್ಕೆ ಎಲ್ಲ ಚಟುವಟಿಕೆಗಳು ಸಹಕಾರಿಯಾಗುತ್ತವೆ. ಪ್ರತಿಯೊಬ್ಬ ಮಕ್ಕಳಲ್ಲಿ ತಮ್ಮದೇ ಆದ ಪ್ರತಿಭೆ ಅಡಗಿರುತ್ತದೆ. ಅವಕಾಶ ಸಿಕ್ಕಾಗ ಎಲ್ಲವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

    ತಾಪಂ ಮಾಜಿ ಸದಸ್ಯ ಶರಣಪ್ಪ ನಾಯಕ ಮಾತನಾಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿನೂತನವಾಗಿದ್ದು, ಸಾಂಸ್ಕೃತಿಕ ಹಾಗೂ ಸಾಹಿತ್ಯಿಕವಾಗಿ ಮಕ್ಕಳು ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ.

    ವೈಯಕ್ತಿಕ ಹಾಗೂ ಗುಂಪು ಆಧಾರಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮುಂದಿನ ಭವಿಷ್ಯಕ್ಕೆ ಅನುಕೂಲವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಎಸ್ಡಿಎಂಸಿ ಅಧ್ಯಕ್ಷ ಸಣ್ಣ ಯಂಕಪ್ಪ ದೊಡ್ಡಮನಿ, ಮಾಜಿ ತಾಪಂ ಸದಸ್ಯ ಶರಣಪ್ಪ ನಾಯಕ, ದಳಪತಿ, ವೆಂಕಟೇಶ ಇದ್ದರು.
    ಅರಕೇರಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts