ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸಕ್ಕೆ ಕೆರಳಿದ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನ ಯಶಸ್ವಿಯಾಗಿ ನಡೆಸಿದೆ. ಇನ್ನೂ ಈ ಭಾರತೀಯ ಸೇನೆಯ ಯಶಸ್ವಿ ಕಾರ್ಯಾಚರಣೆಯಿಂದ ದೇಶದಾದ್ಯಂತ ಎಲ್ಲಾ ಭಾಗದ ಜನರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇದರ ಜೊತೆಗೆ ಭಾರತೀಯ ಸೇನೆಯ ಕಾರ್ಯಾಚರಣೆಗೆ ಕರ್ನಾಟಕದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅವರ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ| Praveen sood
ಜೊತೆಗೆ ರಾಜ್ಯದಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿ ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಮಾನ್ಯ ಸಚಿವರ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಡಾ.ಎಂ.ವಿ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಸಶಸ್ತ್ರ ಪಡೆಗಳ ಶಕ್ತಿಯುತ ದಾಳಿಗೆ ‘ಪವನ್ ಕಲ್ಯಾಣ್’ ಶ್ಲಾಘನೆ; ಪ್ರಭಾವಿಗಳು, ಸೆಲೆಬ್ರಿಟಿಗಳಿಗೆ ಎಚ್ಚರಿಕೆ| Pawan kalyan
ಆಪರೇಷನ್ ಸಿಂಧೂರದ ಯಶಸ್ವಿ ಕಾರ್ಯಾಚರಣೆಗೆ ಇಡೀ ದೇಶಾದ್ಯಂತ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಬೆಂಗಳೂರಲ್ಲಿ ಸಾರ್ವಜನಿಕರು ಮತ್ತು ವೀರ ಕನ್ನಡಿಗರ ಘರ್ಜನೆ ಸೇನೆ, ತೆಂಗಿನ ಕಾಯಿ ಒಡೆದು ಭಾರತೀಯ ಸೇನೆಗೆ ಇನ್ನಷ್ಟು ಶಕ್ತಿ ಬರಲಿ ಅಂತ ಪ್ರಾರ್ಥನೆ ಮಾಡಿದ್ದಾರೆ.
ಭಾರತೀಯ ಯೋಧರ ಫೋಟೋಗೆ ಕರ್ಪೂರದ ಆರತಿ ಮಾಡಿ ಬಗೆ, ಬಗೆಯ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗುತ್ತಿದೆ.
(ಏಜೆನ್ಸೀಸ್)
ಭಯೋತ್ಪಾದಕ ದಾಳಿ; ವಿಮಾನ ವಿಳಂಬದ ಬಗ್ಗೆ ಸೂಚನೆ ನೀಡಿದ ಬೆಂಗಳೂರು ವಿಮಾನ ನಿಲ್ದಾಣ| airport