ಸಂವಿಧಾನದ ಆದರ್ಶನಗಳನ್ನು ಸಂರಕ್ಷಿಸುವ ನಮ್ಮ ಪ್ರಯತ್ನಗಳನ್ನು ಬಲಪಡಿಸಲಿ; ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ PM Narendra Modi

Narendra Modi
Published on

ನವದೆಹಲಿ: ದೇಶವು ಗಣರಾಜ್ಯೋತ್ಸವದ ಸಂಭ್ರಮಕ್ಕೆ ಸಜ್ಜಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು (ಜನವರಿ 26) ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ದೇಶಾದ್ಯಂತ  ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Narendra Modi) ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಈ ಬಗ್ಗೆ ಪೋಸ್ಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ಧಾರೆ. ಇಂದು ನಾವೆಲ್ಲರೂ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ ಎಂದು ಖಚಿತಪಡಿಸಿದ ಎಲ್ಲಾ ಜನತೆಗೂ ತಲೆಬಾಗಿ ನಮಸ್ಕರಿಸುತ್ತೇನೆ. ಈ ಗಣರಾಜ್ಯೋತ್ಸವವು ನಮ್ಮ ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವಸ, ಬಲಿಷ್ಠ ಮತ್ತು ಸಮೃದ್ಧ ಭಾರತಕ್ಕಾಗಿ ಕೆಲಸ ಮಾಡುವ ನಮ್ಮ ಪ್ರಯತ್ನಗಳನ್ನು ಬಲಪಡಿಸಲಿ ಎಂದು ಟ್ವೀಟ್​ ಮೂಲಕ ಶುಭ ಕೋರಿದ್ದಾರೆ.

ಪ್ರತಿ ವರ್ಷ ಗಣರಾಜ್ಯೋತ್ಸವಕ್ಕೆ ಒರ್ವ ವಿದೇಶಿ ಗಣ್ಯ ವ್ಯಕ್ತಿಯನ್ನು ಅತಿಥಿಯಾಗಿ ಆಹ್ವಾನಿಸಲಾಗುತ್ತದೆ. ಅದರಂತೆ ಈ ವರ್ಷ, ಇಂಡೋನೇಷ್ಯಾದ ನೂತನ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದ ಬಳಿಕ ಕರ್ತವ್ಯ ಪಥದಲ್ಲಿ ಪಥಸಂಚಲನ ನಡೆಯಲಿದೆ.

ಗಣರಾಜ್ಯೋತ್ಸವದ ಹಿನ್ನೆಲೆ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ಮುನ್ನೆಚ್ಚರಿಕೆಯನ್ನು ವಹಿಸಿದ್ದಾರೆ. ಕಾರ್ಯಕ್ರಮಕ್ಕೆ ಬರುವ ಜನರಿಗೆ ಪ್ರತ್ಯೇಕ ಪಾಸ್​ಗಳನ್ನು ನೀಡಲಾಗಿದ್ದು, ಕೆಂಪುಕೋಟೆಯ ಸುತ್ತ ಸಿಸಿಟಿವಿಗಳನ್ನು ಅಳವಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net