More

    ಮಹಿಳೆಯರು ಸ್ಮರಣೀಯ ಸಾಧಕರಾಗಲಿ

    ಮಳವಳ್ಳಿ: ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ದೊರಕಿದ್ದು, ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಸ್ಮರಣೀಯ ಸಾಧಕರಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುಷ್ಮಾ ರಾಜು ಸಲಹೆ ನೀಡಿದರು.

    ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪಟ್ಟಣದ ವಿದ್ಯಾ ಪ್ಯಾರಾ ಮೆಡಿಕಲ್ ಕಾಲೇಜಿಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಹೆಣ್ಣು ಮಕ್ಕಳು ತಮ್ಮದೇ ಆದ ಛಾಪು ಮೂಡಿಸುತ್ತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳಾ ಸಮಾನತೆಗೆ ಸಿಗುತ್ತಿರುವ ಸಂವಿಧಾನತ್ಮಕ ಹಕ್ಕು ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಂದರು.

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಮಾದೇಶ್, ವಿದ್ಯಾರ್ಥಿನಿಯರು ಕಾನೂನಿನ ಬಗ್ಗೆ ಅರಿವು ಹೊಂದುವ ಮೂಲಕ ಮಹಿಳೆಯರಿಗೆ ಮಾರ್ಗದರ್ಶಕರಾಗಬೇಕು ಎಂದು ಸಲಹೆ ನೀಡಿದರು.

    ಪ್ರಧಾನ ಸಿವಿಲ್ ನ್ಯಾಯಾಧೀಶ ಸಚಿನ್‌ಕುಮಾರ್ ಶಿವಪೂಜಿ ಮತ್ತು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಎಚ್.ಎಸ್.ಕಾವ್ಯಶ್ರೀ ಮಾತನಾಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಮಲ್ಲಪ್ಪ, ಸಹಾಯಕ ಸರ್ಕಾರಿ ಅಭಿಯೋಜಕ ರವಿಸೆಂತಿಲ್, ಅಪರ ಸರ್ಕಾರಿ ವಕೀಲ ಶ್ರೀಕಂಠಸ್ವಾಮಿ, ಕಾಲೇಜು ಪ್ರಾಂಶುಪಾಲ ಚಂದ್ರಮೋಹನ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts