ಸಿನಿಮಾ

ಮಳೆ ಹಾನಿ ವರದಿ ನೀಡಲು ಶಾಸಕ ಬಸವಂತಪ್ಪ ಸೂಚನೆ

ದಾವಣಗೆರೆ : ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೋಲ್ಕುಂಟೆ, ತೋಗಲೇರಿ ಸೇರಿ ವಿವಿಧ ಗ್ರಾಮಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ಕೊಯ್ಲಿಗೆ ಬಂದ ಭತ್ತ ಹಾನಿಯಾಗಿದ್ದು ಈ ಬಗ್ಗೆ ವರದಿ ಸಿದ್ಧಪಡಿಸಿ, ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡುವಂತೆ ಶಾಸಕ ಕೆ.ಎಸ್. ಬಸವಂತಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
 ವಿಧಾನಸೌಧದಲ್ಲಿ ಸೋಮವಾರ ಮೊದಲ ಅಧಿವೇಶನ ಮತ್ತು ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಇಂದು ರೈತರನ್ನು ಭೇಟಿ ಮಾಡಲು ಆಗಿಲ್ಲ. ಆದರೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.
 ಅಧಿವೇಶನ ಮುಗಿದ ಕೂಡಲೇ ಬೆಂಗಳೂರಿನಿಂದ ಕ್ಷೇತ್ರಕ್ಕೆ ಹಿಂದಿರುಗಿ ನಷ್ಟಕ್ಕೊಳಗಾಗಿರುವ ಗ್ರಾಮಗಳಿಗೆ ತೆರಳಿ ರೈತರ ಸಮಸ್ಯೆಗಳನ್ನು ಆಲಿಸುತ್ತೇನೆ ಎಂದು ಬಸವಂತಪ್ಪ ಹೇಳಿದ್ದಾರೆ.

Latest Posts

ಲೈಫ್‌ಸ್ಟೈಲ್