18.5 C
Bangalore
Monday, December 16, 2019

ಟೆಸ್ಟ್​ ಕ್ರಿಕೆಟ್​ನಲ್ಲಿ 2ನೇ ಡಬಲ್​ ಸೆಂಚುರಿ ಬಾರಿಸಿ ದಿಗ್ಗಜರ ದಾಖಲೆ ಮುರಿದ ಕನ್ನಡಿಗ ಮಯಾಂಕ್​ ಅಗರ್​ವಾಲ್​!

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಇಂದೋರ್​: ಟೆಸ್ಟ್​ ಕ್ರಿಕೆಟ್​ನಲ್ಲಿ​ ಮತ್ತೊಂದು ಡಬಲ್​ ಸೆಂಚುರಿ ಬಾರಿಸುವ ಮೂಲಕ ಕನ್ನಡಿಗ ಮಯಾಂಕ್​ ಅಗರ್​ವಾಲ್​ ತಮ್ಮ ಬ್ಯಾಟಿಂಗ್​ ಸಾಮರ್ಥ್ಯ ಏನೆಂಬುದನ್ನು ಪುನಃ ಸಾಬೀತು ಮಾಡಿದ್ದಾರೆ.

ಮಧ್ಯಪ್ರದೇಶದ ಇಂದೋರ್​ನ ಹೋಳ್ಕರ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಮೊದಲನೇ ಟೆಸ್ಟ್​ ಪಂದ್ಯದಲ್ಲಿ ಮಯಾಂಕ್​ ಅಗರ್​ವಾಲ್​ ಬ್ಯಾಟಿಂಗ್​ನಲ್ಲಿ ಪಾರುಪತ್ಯ ಮೆರೆದಿದ್ದಾರೆ.

ಸದ್ಯದ ವರದಿಯ ಪ್ರಕಾರ ದ್ವಿಶತಕ ಸಂಭ್ರಮಿಸಿ ಮಯಾಂಕ್​ ಬ್ಯಾಟಿಂಗ್​ ಮುಂದುವರಿಸಿದ್ದಾರೆ. ಟೀಮ್​ ಇಂಡಿಯಾ ಭಾರಿ ಮೊತ್ತವನ್ನು ಕಲೆಹಾಕುವಲ್ಲಿ ಮಯಾಂಕ್​ ಪ್ರಮುಖ ಪಾತ್ರವಹಿಸಿದ್ದಾರೆ. ವಿಶೇಷವೆಂದರೆ 196 ರನ್​ ಆಗಿದ್ದಾಗ ದ್ವಿಶತಕ ಸಂಭ್ರಮಕ್ಕೆ ಬೇಕಿದ್ದ 4 ರನ್​ಗಳನ್ನು ಮಾಜಿ ಸ್ಫೋಟಕ ಆಟಗಾರ ವೀರೇಂದ್ರ ಸೆಹ್ವಾಗ್​ ಶೈಲಿಯಲ್ಲಿ ಸಿಕ್ಸರ್​ ಬಾರಿಸುವ ಮೂಲಕ ಸಂಭ್ರಮಿಸಿದರು.

ದ್ವಿಶತಕ ಬಾರಿಸುವ ಮೂಲಕ ಮಯಾಂಕ್​ ಗಮನಾರ್ಹ ದಾಖಲೆಯನ್ನು ಮಾಡಿದ್ದಾರೆ. ಅತಿವೇಗವಾಗಿ 2ನೇ ಡಬಲ್​ ಸೆಂಚುರಿ ಬಾರಿಸಿದ ಎರಡನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗುವ ಮೂಲಕ ಕ್ರಿಕೆಟ್​ ದಿಗ್ಗಜರಾದ ಡಾನ್​ ಬ್ರಾಡ್​ಮನ್​ ಮತ್ತು ಲಾರೆನ್ಸ್​ ರಾವ್​ ದಾಖಲೆಯನ್ನು ಮುರಿದಿದ್ದಾರೆ. ಕೇವಲ 12 ಇನ್ನಿಂಗ್ಸ್​ನಲ್ಲಿ ಮಯಾಂಕ್​ ಈ ಸಾಧನೆ ಮಾಡಿದ್ದಾರೆ.

ವೀರೇಂದ್ರ ಸೆಹ್ವಾಗ್​ ಸುನೀಲ್​ ಗವಾಸ್ಕರ್​, ವಿಂದೊ ಮಂಕಡ್​ ಮತ್ತು ವಾಸಿಂ ಜಾಫರ್​ ಬಳಿಕ 2 ಡಬಲ್​ ಸೆಂಚುರಿ ಬಾರಿಸಿದ 5ನೇ ಭಾರತೀಯ ಆಟಗಾರನೆಂಬ ಹೆಸರನ್ನು ಮಯಾಂಕ್​ ಗಳಿಸಿದ್ದಾರೆ.

ಗುರುವಾರ ಆರಂಭವಾದ ಟೆಸ್ಟ್​ ಸರಣಿಯ ಮೊದಲನೇ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆರಂಭಿಸಿದ ಬಾಂಗ್ಲಾ ಪಡೆ ಮೊದಲನೇ ಇನ್ನಿಂಗ್ಸ್​ನಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 150 ರನ್​ ಕಲೆಹಾಕಿತು. ಗುರಿ ಬೆನ್ನತ್ತಿರುವ ಭಾರತ ಎರಡನೇ ದಿನಾದಾಟದಲ್ಲಿ ಈವರೆಗೆ 105 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 403 ರನ್​ ಗಳಿಸಿ ಆಟವಾಡುತ್ತಿದೆ. ಮಯಾಂಕ್​ ಅಗರ್​ವಾಲ್​ 230* ಹಾಗೂ ರವೀಂದ್ರ ಜಡೇಜ 22* ರನ್​ ಗಳಿಸಿದ ಕ್ರೀಸ್​ನಲ್ಲಿದ್ದಾರೆ. (ಏಜೆನ್ಸೀಸ್​)

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...