ಮಮತಾ ಬ್ಯಾನರ್ಜಿಯನ್ನು ಪ್ರಧಾನಿ ಮೋದಿ, ಅಮಿತ್​ ಷಾ ಟಾರ್ಗೆಟ್​ ಮಾಡಿದ್ದಾರೆ ಎಂದು ದೂರಿದ ಮಾಯಾವತಿ

ಲಖನೌ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಟಾರ್ಗೆಟ್​ ಮಾಡಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಆರೋಪಿಸಿದ್ದಾರೆ.

ಮಮತಾ ಬ್ಯಾನರ್ಜಿ ವಿರುದ್ಧ ನರೇಂದ್ರ ಮೋದಿ, ಅಮಿತ್​ ಷಾ ಹಾಗೂ ಬಿಜೆಪಿ ನಾಯಕರು ಯೋಜನೆ ರೂಪಿಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದು ಒಂದು ದೇಶದ ಪ್ರಧಾನ ಮಂತ್ರಿಗಳ ಘನತೆಗೆ ಶೋಭಿಸುವುದಿಲ್ಲ ಎಂದು ಮಮತಾ ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳದಲ್ಲಿನ ರಾಜಕೀಯ ಸ್ಥಿತಿ ಹಾಗೂ ಹಿಂಸಾಚಾರದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ, ಗುರುವಾರ ರಾತ್ರಿ 10ರಿಂದ ಬಹಿರಂಗ ಪ್ರಚಾರಕ್ಕೆ ನಿಷೇಧ ಹೇರಿದೆ. ಆದರೆ ಚುನಾವಣಾ ಆಯೋಗ ಪಕ್ಷಪಾತ ನೀತಿ ಅನುಸರಿಸಿದೆ. ಇಂದು ಪ್ರಧಾನಿ ಮೋದಿ ಅವರ 2 ಚುನಾವಣಾ ಪ್ರಚಾರ ಸಭೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ಬಹಿರಂಗ ಪ್ರಚಾರಕ್ಕೆ ನಿಷೇಧ ಹೇರದೆ. ರಾತ್ರಿ 10 ಗಂಟೆಯಿಂದ ಪ್ರಚಾರಕ್ಕೆ ನಿಷೇಧ ಹೇರಿದೆ. ಇದು ಚುನಾವಣಾ ಆಯೋಗ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವುದನ್ನು ತೋರಿಸುತ್ತದೆ ಎಂದು ಆಯೋಗದ ವಿರುದ್ಧ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *