ಶಾಸಕ-ಮೇಯರ್​ ದಂಪತಿ ವಿರುದ್ಧ KSRTC ಚಾಲಕನಿಗೆ ಸೋಲು! ಪೊಲೀಸರ ವರದಿಯಲ್ಲಿದೆ ಸ್ಫೋಟಕ ಸಂಗತಿ | Mayor-KSRTC driver dispute

Mayor-KSRTC driver dispute

Mayor-KSRTC driver dispute: ಕೆಎಸ್​ಆರ್​ಟಿಸಿ ಚಾಲಕ ಎಚ್​.ಎಲ್​. ಯಧು ದಾಖಲಿಸಿದ್ದ ಪ್ರಕರಣದಲ್ಲಿ ದೇಶದ ಅತಿ ಕಿರಿಯ ಮೇಯರ್ ಹಾಗೂ ರಾಜ್ಯದ ಅತಿ ಕಿರಿಯ ಶಾಸಕನೆಂಬ ಹೆಗ್ಗಳಿಕೆ ಪಾತ್ರರಾಗಿರುವ ಮೇಯರ್​ ಆರ್ಯ ರಾಜೇಂದ್ರನ್​ ಮತ್ತು ಆಕೆಯ ಪತಿ ಹಾಗೂ ಶಾಸಕ ಸಚಿನ್​ ದೇವ್​ಗೆ ಕೇರಳ ಪೊಲೀಸರು ಕ್ಲಿನ್​ಚಿಟ್​ ನೀಡಿದ್ದಾರೆ.

ಪ್ರಕರಣ ಸಂಬಂಧ ತಿರುವನಂತಪುರಂನ ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​ ಸಲ್ಲಿಸಿದ ವರದಿಯಲ್ಲಿ, ಮೇಯರ್ ಆರ್ಯ ಅಥವಾ ಶಾಸಕ ಸಚಿನ್ ದೇವ್ ಅವರು ಅಸಭ್ಯ ಭಾಷೆ ಬಳಸಿದ್ದಾರೆ ಅಥವಾ ದೇವ್ ಅವರು ಬಲವಂತವಾಗಿ ಬಸ್‌ಗೆ ಪ್ರವೇಶಿಸಿದ್ದಾರೆ ಎಂಬ ಆರೋಪ ಸಾಬೀತು ಮಾಡಲು ಯಾವುದೇ ಪುರಾವೆಗಳಿಲ್ಲ ಎಂದು ಉಲ್ಲೇಖಿಸಲಾಗಿದೆ.

ವರದಿಯ ಪ್ರಕಾರ, ಸಾಕ್ಷಿಗಳ ಹೇಳಿಕೆಗಳು ಮತ್ತು ಸಿಸಿಟಿವಿ ದೃಶ್ಯಗಳು ಐಪಿಸಿಯ ಸೆಕ್ಷನ್ 294 ಬಿ ಅಡಿಯಲ್ಲಿ ಮೇಯರ್ ಮತ್ತು ಸಚಿನ್ ದೇವ್ ಅಶ್ಲೀಲ ಭಾಷೆ ಬಳಸಿದ್ದಾರೆ ಎಂಬ ಆರೋಪಗಳನ್ನು ರುಜುವಾತುಪಡಿಸುವುದಿಲ್ಲ. ಸಚಿನ್ ದೇವ್ ಅವರು ಕೆಎಸ್‌ಆರ್‌ಟಿಸಿ ಬಸ್‌ಗೆ ಬಲವಂತವಾಗಿ ನುಗ್ಗಲಿಲ್ಲ ಆದರೆ, ಹೈಡ್ರಾಲಿಕ್ ಸಿಸ್ಟಮ್‌ನಿಂದ ನಿಯಂತ್ರಿಸಲ್ಪಡುವ ಬಸ್‌ನ ಬಾಗಿಲನ್ನು ಚಾಲಕ ಯಧು ಸ್ವತಃ ತೆರೆದಿದ್ದಾನೆ ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ.

ಹೆಚ್ಚುವರಿಯಾಗಿ, ಯಧು ಚಾಲನೆ ಮಾಡುತ್ತಿದ್ದ ಬಸ್ ತನ್ನ ಗೊತ್ತುಪಡಿಸಿದ ಮಾರ್ಗವನ್ನು ಅನುಸರಿಸುತ್ತಿರಲಿಲ್ಲ ಎಂದು ವರದಿಯು ಹೈಲೈಟ್ ಮಾಡಿದೆ. ಬೇಕರಿ ಜಂಕ್ಷನ್ ಮೂಲಕ ತಂಪನೂರಿಗೆ ತೆರಳಬೇಕಿದ್ದ ವಾಹನ ಪಿಎಂಜಿ–ಪಾಳ್ಯಂ–ವಿಜೆಟಿ ಮಾರ್ಗವಾಗಿ ಸಂಚರಿಸಿತು. ಮಹಿಳೆಗೆ ಕಿರುಕುಳ ನೀಡಿದ ಪ್ರಕರಣ ಸೇರಿದಂತೆ ಯಧು ವಿರುದ್ಧ ನೆಯ್ಯಟ್ಟಿಂಕರ, ಪೆರೂರ್ಕಡ ಮತ್ತು ತಂಪನೂರು ಪೊಲೀಸ್ ಠಾಣೆಗಳಲ್ಲಿ ಈ ಹಿಂದೆಯೇ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಹಿಂದು ದೇವಾಲಯದ ಜೀರ್ಣೋದ್ಧಾರಕ್ಕಾಗಿ 1 ಕೋಟಿ ರೂ. ಬಿಡುಗಡೆ ಮಾಡಿದ ಪಾಕಿಸ್ತಾನ! Hindu Temple

ಪ್ರಸ್ತುತ ಪ್ರಕರಣದ ವಿಚಾರಣೆಯನ್ನು ತಿರುವನಂತಪುರಂನ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಡೆಸುತ್ತಿದ್ದು, ಅಕ್ಟೋಬರ್ 30 ರಂದು ತೀರ್ಪು ಹೊರಬೀಳಲಿದೆ.

ಏನಿದು ಪ್ರಕರಣ?

ಕಳೆದ ಏಪ್ರಿಲ್ 27ರಂದು ಆರ್ಯ ರಾಜೇಂದ್ರನ್​ ದಂಪತಿ ತಮ್ಮ ಖಾಸಗಿ ವಾಹನದ ಮೂಲಕ ಕೆಸ್​ಆರ್​ಟಿಸಿ ಬಸ್​ ಓವರ್​ಟೇಕ್​ ಮಾಡುವಾಗ ಚಾಲಕ ಯಧು ಕೆಟ್ಟದಾಗಿ ಸನ್ನೆ ಮಾಡುವ ಮೂಲಕ ಅಸಭ್ಯವಾಗಿ ವರ್ತಿಸಿದ ಎಂದು ಆರೋಪ ಮಾಡಿದರು. ಇದೇ ವಿಚಾರಕ್ಕೆ ಸ್ಥಳದಲ್ಲಿ ವಾಗ್ವಾದ ಸಹ ನಡೆಯಿತು. ಈ ಘಟನೆಯ ಬಗ್ಗೆ ಮಾತನಾಡಿದ ಮೇಯರ್​ ಆರ್ಯ, ಇದು ಬಸ್​ ಅನ್ನು ಓವರ್​ಟೇಕ್​ ಮಾಡುವ ವಿಚಾರ ಮಾತ್ರವಲ್ಲ, ಮಹಿಳೆಯರ ಕಡೆಗೆ ಬಸ್​ ಚಾಲಕನೊಬ್ಬ ಅಸಭ್ಯವಾಗಿ ವರ್ತಿಸಿದ್ದನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದರು. ನನ್ನ ಸೋದರ ಸಂಬಂಧಿಯ ಮದುವೆ ಇತ್ತು. ಸಮಾರಂಭ ಮುಗಿಸಿ ಕುಟುಂಬ ಸಮೇತ ಮನೆಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ನಮ್ಮ ಕಾರಿಗೆ ಡಿಕ್ಕಿ ಹೊಡೆದಿದೆ. ಆದರೆ ನಾವು ಅದನ್ನು ನಿರ್ಲಕ್ಷಿಸಿದ್ದೇವೆ. ಆದರೆ ಚಾಲಕ ನಮಗೆ ದಾರಿ ನೀಡಲು ನಿರಾಕರಿಸಿದನು. ಕೊನೆಗೆ ನಾವು ಆತನನ್ನು ಹಿಂದಿಕ್ಕಿ, ಓವರ್​ಟೇಕ್​ ಮಾಡುವಾಗ ಚಾಲಕ ಅಶ್ಲೀಲ ಸನ್ನೆಗಳನ್ನು ಮಾಡುವುದನ್ನು ನಾನು ಮತ್ತು ನನ್ನ ಅತ್ತಿಗೆ ಗಮನಿಸಿದೆವು. ಬಳಿಕ ಚಾಲಕನನ್ನು ಪಾಳಯಂ ಸಫಲ್ಯಂ ಕಾಂಪ್ಲೆಕ್ಸ್‌ನ ಮುಂದೆ ತಡೆದು ನಿಲ್ಲಿಸಿದೆವು ಎಂದು ಆರ್ಯ ತಿಳಿಸಿದರು.

ಈ ವೇಳೆ ಚಾಲಕನ ಪ್ರತಿಕ್ರಿಯೆ ದಿಗಿಲು ಹುಟ್ಟಿಸುವಂತಿತ್ತು. ಚಾಲಕ ನನ್ನ ಹಾಗೂ ನನ್ನ ಸಹೋದರನೊಂದಿಗೆ ಅಸಭ್ಯವಾಗಿ ಮಾತನಾಡಿದ್ದಾರೆ. ಅವರ ಅಶಿಸ್ತಿನ ವರ್ತನೆಯನ್ನು ಸಾಕ್ಷಿಗಳ ಮೂಲಕ ರುಜುವಾತುಪಡಿಸಬಹುದು. ಹೆಚ್ಚಿನ ದುರ್ನಡತೆಯನ್ನು ಗಮನಿಸಿದ ನಂತರ ನಾನು ಸಾರಿಗೆ ಸಚಿವ ಕೆ.ಬಿ.ಗಣೇಶ್ ಕುಮಾರ್ ಅವರನ್ನು ಸಂಪರ್ಕಿಸಿದೆ. ಜಾಗೃತ ದಳ ಮತ್ತು ಕಂಟೋನ್ಮೆಂಟ್ ಪೊಲೀಸರು ಸ್ಥಳಕ್ಕೆ ಬಂದರು. ಅಧಿಕಾರಿಗಳು ಮಧ್ಯಪ್ರವೇಶಿಸಿದ ನಂತರ ಚಾಲಕ ಕ್ಷಮೆಯಾಚಿಸಿದರೂ, ನಾನು ಅದನ್ನು ಸ್ವೀಕರಿಸಲು ನಿರಾಕರಿಸಿದೆ. ಇದು ನನ್ನ ಬಗ್ಗೆ ಮಾತ್ರವಲ್ಲ, ಮಹಿಳೆಯರು ಅನುಭವಿಸುವ ಅವಮಾನಕ್ಕೆ ಸಂಬಂಧಿಸಿದ್ದಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಚಾಲಕ ಯಧು, ಘಟನೆಯ ಬಗ್ಗೆ ತಮ್ಮ ಹೇಳಿಕೆಯನ್ನು ನೀಡಿದರು. ಮೇಯರ್ ಮತ್ತು ಅವರ ಸಹಚರರು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪ್ರತಿಪಾದಿಸಿದರು. ಯಧು ಪ್ರಕಾರ, ಮೇಯರ್ ವಾಹನವು ಪ್ಲಾಮೂಡ್ ಮತ್ತು ಪಿಎಂಜಿ ನಡುವಿನ ಏಕಮುಖ ರಸ್ತೆಯಲ್ಲಿ ಎಡಭಾಗದಿಂದ ಬಸ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿತು. ತಿರುವನಂತಪುರಂ ಮೇಯರ್ ಮತ್ತು ಎಂಎಲ್ಎ ಎಂಬುದು ಗೊತ್ತಿಲ್ಲದೆ ನಾನು ಅವರೊಂದಿಗೆ ವಾಗ್ವಾದ ನಡೆಸಿದ್ದೇನೆ. ತ್ರಿಶೂರ್-ಆಲಪ್ಪುಳ-ತಿರುವನಂತಪುರ ಮಾರ್ಗದ ಬಸ್ ಇದಾಗಿದೆ. ನಾನು ಈಗಾಗಲೇ ಎರಡು ವಾಹನಗಳಿಗೆ ಓವರ್‌ಟೇಕ್ ಮಾಡಲು ಅವಕಾಶ ನೀಡಿದ್ದೆ. ಮೇಯರ್ ಕಾರು ಮೂರನೆಯದು. ಪ್ಲಾಮೂಡ್ ಮತ್ತು ಪಿಎಂಜಿ ನಡುವಿನ ಏಕಮುಖ ಮಾರ್ಗದಲ್ಲಿ ಕಾರನ್ನು ಓವರ್‌ಟೇಕ್ ಮಾಡಲು ಅವಕಾಶವಿರಲಿಲ್ಲ. ಹೀಗಿದ್ದರೂ, ಕಾರು ಬಸ್ಸಿನ ಮುಂದೆ ನಿಂತಿತು. ನಾನು ಅವರ ಅಗೌರವದ ವರ್ತನೆಗೆ ಪ್ರತಿಕ್ರಿಯಿಸಲಿಲ್ಲ. ಅಲ್ಲಿಯವರೆಗೆ ಅವರು ಯಾರೆಂಬುದು ಸಹ ನನಗೆ ತಿಳಿದಿರಲಿಲ್ಲ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ನನ್ನ ತಪ್ಪು ಕಂಡು ಬಂದರೆ ಕ್ರಮ ಕೈಗೊಳ್ಳಬಹುದು ಎಂದು ಯಧು ಹೇಳಿದ್ದರು. (ಏಜೆನ್ಸೀಸ್​)

ರಸ್ತೆ ಏನು ನಿಮ್ಮ ಅಪ್ಪನ ಮನೆ ಆಸ್ತಿಯಾ? ಶಾಸಕ-ಮೇಯರ್​ ದಂಪತಿಗೆ KSRTC ಡ್ರೈವರ್​ ತಾಯಿಯಿಂದ ತರಾಟೆ

ಶಾಸಕ-ಮೇಯರ್​ ದಂಪತಿ ವಿರುದ್ಧ KSRTC ಚಾಲಕನಿಗೆ ಮೊದಲ ಗೆಲುವು! ಪೊಲೀಸರು ಕೈ ಬಿಟ್ರು ಕೋರ್ಟ್​ ಬಿಡಲಿಲ್ಲ

Share This Article

Health Tips: ನೆಲದ ಮೇಲೆ ಕುಳಿತುಕೊಂಡು ತಿನ್ನಲು ಸಾಧ್ಯವಿಲ್ಲವೇ? ಆದ್ರೆ ಈ ಅದ್ಭುತ ಪ್ರಯೋಜನಗಳೇನು ಗೊತ್ತಾ?

Health Tips: ನಮ್ಮ ಹಿರಿಯರು ಊಟ ಮಾಡುವಾಗ ನೆಲದ ಮೇಲೆ ಕಾಲು ಮಡಚಿ ಕೂರುತ್ತಿದ್ದರು. ಆಧುನಿಕ ಕಾಲದಲ್ಲಿ…

Alcohol In Winter: ಚಳಿಯಲ್ಲಿ ಮದ್ಯ ಸೇವನೆ ಎಷ್ಟು ಅಪಾಯಕಾರಿ ಗೊತ್ತಾ?

Alcohol In Winter: ಚಳಿಗಾಲ ಆರಂಭವಾಗಿದೆ ಮತ್ತು ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಲ್ಲದೆ, ಜ್ವರ…

ಚಳಿಗಾಲದಲ್ಲಿ ಸೀಬೆಹಣ್ಣನ್ನು ಹೇಗೆ ತಿಂದರೆ ಆರೋಗ್ಯಕ್ಕೆ ಪ್ರಯೋಜನಕಾರಿ; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಸೀಬೆಹಣ್ಣು ತಿನ್ನುವುದರಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ತಲೆಯಿಂದ ಕಾಲ್ಬೆರಳು ಉಗುರುಗಳವರೆಗೆ ಆರೋಗ್ಯಕರವಾಗಿರಲು ಇದು ಕಿತ್ತಳೆಗಿಂತ ಹೆಚ್ಚು…