More

    ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ: ಎಂ.ಬಿ.ಪಾಟೀಲ್

    ಮೈಸೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಲೋಕಸಭೆ ಚುನಾವಣೆ ಬಳಿಕ ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

    ಮೈಸೂರಿನಲ್ಲಿ ದಿಗ್ವಿಜಯ ನ್ಯೂಸ್​ನೊಂದಿಗೆ ಎಂ.ಬಿ.ಪಾಟೀಲ್ ಮಾತನಾಡುತ್ತಾ, ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಮುಂಖ್ಯಮಂತ್ರಿ ಆಗಿರಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

    ಇದನ್ನೂ ಓದಿ: ಕಬ್ಬನ್ ಪಾರ್ಕ್​ಗೆ ಹೋಗುವವರೇ ಹುಷಾರ್! ಇಲ್ಲಿದೆ ಕಾರಣ…

    ನೊಂದವರಿಗೆ ನ್ಯಾಯ ಕೊಡಿಸುತ್ತೇವೆ…

    ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್​ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ. ಪ್ರತಿಯೊಂದು ಹಗರಣಗಳನ್ನೂ ಬಯಲಿಗೆಳೆಯುತ್ತೇವೆ. ಈ ಮೂಲಕ ತಪ್ಪಿಸ್ಥರನ್ನು ಶಿಕ್ಷೆಗೊಳಪಡಿಸಿ, ನೊಂದವರಿಗೆ ನ್ಯಾಯ ಕೊಡಿಸುತ್ತೇವೆ ಎಂದರು.

    ಇದನ್ನೂ ಓದಿ: ಜಗದೀಶ್ ಶೆಟ್ಟರ್ ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಪಕ್ಷ ತೀರ್ಮಾನಿಸಿದೆ: ಎಂ.ಬಿ.ಪಾಟೀಲ್

    ಯಾವುದೇ ಬದಲಾವಣೆ ಇಲ್ಲ!

    ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆಯಾಗಿದ್ದು, ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts