

ಮುಂಬೈ: 17ನೇ ಆವೃತ್ತಿ ಐಪಿಎಲ್ ಶುರುವಾಗುವುದಕ್ಕೂ ಮುಂಚೆಯಿಂದಲೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಒಂದಿಲ್ಲೊಂದು ವಿವಾದಗಳಿಂದಲೇ ಸದ್ದು ಮಾಡುತ್ತಿದ್ದು, ಕ್ರೀಡಾಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ನಾಯಕ ಹಾರ್ದಿಕ್ ಪಾಂಡ್ಯ ಮುಂಬೈ ನಾಯಕತ್ವ ವಹಿಸಿಕೊಂಡ ದಿನದಿಂದಲೂ ಒಂದಿಲ್ಲೊಂದು ವಿಚಾರಕ್ಕೆ ಟೀಕೆಗೆ ಗುರಿಯಾಗಿದ್ದ ಹಾರ್ದಿಕ್ ಈಗ ಮತ್ತೊಂದು ವಿಚಾರಕ್ಕೆ ಎಲ್ಲರ ಗಮನ ಸೆಳೆದಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿದ ದಿನದಿಂದಲೂ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಒಂದಲ್ಲ ಒಂದು ರೀತಿಯಲ್ಲಿ ಭಾರಿ ನಿಂದನೆಗೆ ಒಳಗಾಗುತ್ತಿದ್ದಾರೆ. ಮೊದಲು ರೋಹಿತ್ರಿಂದ ನಾಯಕತ್ವ ಕಿತ್ತುಕೊಂಡರು ಎಂಬ ವಿಚಾರದಲ್ಲಿ ನಿಂದನೆಗೆ ಒಳಗಾಗಿದ್ದ ಪಾಂಡ್ಯ ಆ ಬಳಿಕ ತಂಡದ ಸತತ ಸೋಲಿನೊಂದಿಗೆ ಟ್ರೋಲಿಗರಿಗೆ ಆಹಾರವಾಗಿದ್ದರು.
ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡ ಆಡಿದ ಎರಡೂ ಪಂದ್ಯಗಳನ್ನು ಸೋತಿದೆ. ಈ ವೇಳೆ ಹಾರ್ದಿಕ್ ಪಾಂಡ್ಯರ ನಾಯಕತ್ವದ ಮೇಲೆ ಸಾಕಷ್ಟು ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಅಲ್ಲದೇ ಪಂದ್ಯ ನೋಡಲು ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳು ಹಾರ್ದಿಕ್ರನ್ನು ಮನಬಂದಂತೆ ನಿಂದಿಸುತ್ತಿದ್ದಾರೆ. ಅದರ ವಿಡಿಯೋಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದವು.
ಪಂದ್ಯದ ಸಮಯದಲ್ಲಿ ಕ್ರೀಡಾಂಗಣದಲ್ಲಿ ಉಪಸ್ಥಿತರಿರುವ ಅಭಿಮಾನಿಗಳು ಹಾರ್ದಿಕ್ರನ್ನು ನಿಂದಿಸುವ ಕೆಲಸವನ್ನು ಮಾಡಿದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಅದರಂತೆ ಟ್ರೋಲ್ ಮಾಡುವವರನ್ನು ಹಾಗೂ ನಿಂದಿಸುವವರನ್ನು ಮೈದಾನದಿಂದ ಹೊರಹಾಕಲು ತೀರ್ಮಾನಿಸಿದೆ.ಇದೀಗ ಕ್ರೀಡಾಂಗಣದಲ್ಲಿ ಹಾರ್ದಿಕ್ರನ್ನು ನಿಂದಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿದೆ.
ಪಂದ್ಯದ ಸಮಯದಲ್ಲಿ ಕ್ರೀಡಾಂಗಣದಲ್ಲಿ ಉಪಸ್ಥಿತರಿರುವ ಅಭಿಮಾನಿಗಳು ಹಾರ್ದಿಕ್ರನ್ನು ನಿಂದಿಸುವ ಕೆಲಸವನ್ನು ಮಾಡಿದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಪಂದ್ಯದ ವೇಳೆ ಹಾರ್ದಿಕ್ ವಿರುದ್ಧ ಕಾಮೆಂಟ್ ಮಾಡುವ ಅಥವಾ ಘೋಷಣೆಗಳನ್ನು ಕೂಗುವ ಯಾವುದೇ ಪ್ರೇಕ್ಷಕರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತದೆ. ಆ ಬಳಿಕ ಅವರನ್ನು ಕ್ರೀಡಾಂಗಣದಿಂದ ಹೊರಹಾಕಲಾಗುತ್ತದೆ ಎಂದು ವರದಿಯಾಗಿದೆ.