

ನವದೆಹಲಿ: ದೇಶದ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾದ ಹಿನ್ನಲೆ ದೆಹಲಿ ಸರ್ಕಾರ ಇದೀಗ ಪ್ರಮುಖ ನಗರದ ಚರಂಡಿಗಳು ಮತ್ತು ದೂರದ ಪ್ರದೇಶಗಳಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಆ್ಯಂಟಿ ಲಾರ್ವಾ ಸಿಂಪಡನೆ ಮಾಡಲು ಡ್ರೋನ್‌ಗಳನ್ನು ಬಳಸಲು ಮುಂದಾಗಿದೆ.
"ಆ್ಯಂಟಿ ಲಾರ್ವಾ ಸಿಂಪಡಿಸಲು ಡ್ರೋನ್ಗಳ ಅಗತ್ಯವಿದೆ. ಹಾಗಾಗಿ ಶೀಘ್ರದಲ್ಲೇ ಟೆಂಡರ್ ಕರೆಯುತ್ತೇವೆ. ದೆಹಲಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ" ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ.
"ಡ್ರೋನ್‌ಗಳು ಮತ್ತು ಕೃತಕ ಬುದ್ಧಿಮತ್ತೇ ಆಧಾರಿತ ಪ್ಲಾಟ್‌ಫಾರ್ಮ್‌ಗಳನ್ನು ಈ ವರ್ಷ ಡೆಂಗ್ಯೂ ವಿರುದ್ಧ ಹೋರಾಡುವ ಸಮಗ್ರ ಯೋಜನೆಯ ಭಾಗವಾಗಿ ಬಳಸಲಾಗುವುದು. ನಗರವನ್ನು ಸ್ವಚ್ಛ, ಸುರಕ್ಷಿತ ಮಾಡುವುದು ನಮ್ಮ ಯೋಜನೆಯಾಗಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ,(ಏಜೆನ್ಸೀಸ್).