More

    ‘ ಪತ್ನಿ, ಪಾಲಕರೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ’: ಕ್ರೇಜಿವಾಲ್‌

    ನವದೆಹಲಿ: ‘ನಾನು, ನನ್ನ ಪತ್ನಿ, ಪಾಲಕರು ಪೊಲೀಸರಿಗಾಗಿ ಕಾಯುತ್ತಿದ್ದೇವೆ ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ.

    ಇದನ್ನೂ ಓದಿ: ಮಹಾನಟಿ ನಂತರ ಲೆಜೆಂಡರಿ ಸಿಂಗರ್ ಬಯೋಪಿಕ್ ನಲ್ಲಿ ಕೀರ್ತಿ ಸುರೇಶ್?

    ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಕೇಜ್ರಿವಾಲ್‌ ಪೋಸ್ಟ್‌ ಮಾಡಿದ್ದಾರೆ. ಅಲ್ಲದೇ ಪಾಲಕರು, ಪತ್ನಿ ಜೊತೆ ಮನೆಯಲ್ಲಿ ಕಾಯುತ್ತಿರುವ ವೀಡಿಯೋ ಕೂಡ ಹಂಚಿಕೊಂಡಿದ್ದಾರೆ.

    ಬುಧವಾರ(ಮೇ 22)ಪೊಲೀಸರು ಕರೆ ಮಾಡಿ ನನ್ನ ಪಾಲಕರ ವಿಚಾರಣೆಗೆ ಸಮಯ ಕೇಳಿದ್ದಾರೆ. ಆದರೆ ಅವರು ಬರುತ್ತಾರೋ ಇಲ್ಲವೋ ಎಂಬ ಬಗ್ಗೆ ಇನ್ನೂ ಮಾಹಿತಿ ನೀಡಿಲ್ಲ ಎಂದು ತಿಳಿಸಿದ್ದಾರೆ.

    ಸ್ವಾತಿ ಮಲಿವಾಲ್‌ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಬುಧವಾರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದ ಕೇಜ್ರಿವಾಲ್‌ ಅವರು, ನ್ಯಾಯಯುತ ತನಿಖೆ ಆಗಬೇಕು ಎಂದು ಕೋರಿದ್ದರು.

    ಈ ಧರ್ಮದಲ್ಲಿದೆ ಒತ್ತಡ ನಿವಾರಣೆಗೆ ಮದ್ದು! ಖ್ಯಾತ ಪಾಪ್ ತಾರೆ ಕ್ಯಾಮಿಲಾ ಕ್ಯಾಬೆಲ್ಲೊ ಹೇಳಿಕೆ ವೈರಲ್​​​​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts