ಜಿಲ್ಲಾಡಳಿತದಿಂದ ಭಗೀರಥ ಜಯಂತಿ ನಾಳೆ

ಯಾದಗಿರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ 11ರಂದು ಶ್ರೀ ಭಗೀರಥ ಜಯಂತಿ ಸರಳ ಮತ್ತು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತದಿಂದ ಭಗೀರಥ ಜಯಂತಿ 11ರಂದು ಬೆಳಗ್ಗೆ 10ಕ್ಕೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಆಚರಿಸಲಾಗುವುದು. ಜಯಂತಿ ನಿಮಿತ್ತ ಅಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಗೀರಥ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಬೆಳಗ್ಗೆ 9ಕ್ಕೆ ಜಿಲ್ಲೆಯ ಎಲ್ಲ ಸಕರ್ಾರಿ ಕಚೇರಿ ಹಾಗೂ ಸಕರ್ಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಶ್ರದ್ಧಾ, ಭಕ್ತಿಯೊಂದಿಗೆ ಜಯಂತಿ ಕಡ್ಡಾಯವಾಗಿ ಆಚರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆಗದ ರೀತಿಯಲ್ಲಿ ಉಪನ್ಯಾಸ ನೀಡುವ ವ್ಯಕ್ತಿಗಳನ್ನು ನೇಮಕ ಮಾಡಬೇಕು. ಚುನಾವಣಾ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವೇದಿಕೆ ಮೇಲೆ ಅಧಿಕಾರಿಗಳು ಮಾತ್ರ ಕುಳಿತುಕೊಳ್ಳಲು ಅವಕಾಶ ಇದೆ.

ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ದತ್ತಪ್ಪ ಸಾಗನೂರ, ಜಂತ್ಯೋತ್ಸವ ಸಮಿತಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾಜರ್ುನ ಕಟ್ಟಿಮನಿ, ಗೌರವ ಅಧ್ಯಕ್ಷ ಎಂ.ವೆಂಕಟೇಶ, ಉಪ್ಪಾರ ಸಂಘದ ಜಿಲ್ಲಾ ಪ್ರಧಾನ ಕಾರ್ಯದಶರ್ಿ ಸುಭಾಶ್ಚಂದ್ರ ಕೊಟಗಿರಿ, ರಾಮಲಿಂಗಪ್ಪ ಯರಗೋಳ, ಶಿವರಾಜ ಕಿಣಕೇರಿ ಇದ್ದರು.