More

    ಪೌರಕಾರ್ಮಿಕರಿಗೆ ಮನೆ ನಿರ್ಮಿಸಿಕೊಡಲು ಕ್ರಮ

    ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಮನೆ ಇಲ್ಲದ ಪೌರಕಾರ್ಮಿಕರಿಗೆ ಮನೆ ನಿರ್ಮಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಲೆಮಹದೇಶ್ವರ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ತಿಳಿಸಿದರು.

    ಮಹದೇಶ್ವರ ಬೆಟ್ಟದ ನಾಗಮಲೆ ಭವನದ ಸಭಾಂಗಣದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ಧ ಪೌರ ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಇಲ್ಲಿನ ಪೌರ ಕಾರ್ಮಿಕರ ಶ್ರಮ ಅಪಾರ. ಮ.ಬೆಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ 30 ಪೌರ ಕಾರ್ಮಿಕರು ಪ್ರಾಧಿಕಾರದ ಕಾಯಂ ನೌಕರರಾಗಿದ್ದರೆ, 28 ಜನ ಹೊರಗುತ್ತಿಗೆಯ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರಿಗೆ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ಪ್ರಾಧಿಕಾರದ ವತಿಯಿಂದ ಹಲವು ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಇದರಲ್ಲಿ ಪೌರ ಕಾರ್ಮಿಕರ ಕಾಲನಿಯಲ್ಲಿ ಸಿಸಿ ರಸ್ತೆ, ಚರಂಡಿ, ವಿದ್ಯುತ್ ಸೌಕರ್ಯ, ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಲ್ಲದೇ ಗುರುತಿನ ಚೀಟಿ, ಸಮವಸ್ತ್ರ, ಭವಿಷ್ಯ ನಿಧಿ ಸೌಲಭ್ಯ, ವೈದ್ಯಕೀಯ ಸೌಲಭ್ಯ, ಬ್ಯಾಂಕ್‌ನಿಂದ ಸಾಲ, ವಿಮಾ ಸೌಲಭ್ಯ ಇನ್ನಿತರ ಹಲವು ಸವಲತ್ತುಗಳನ್ನು ಕಲ್ಪಿಸಿಕೊಡಲಾಗಿದ್ದು, ಪೌರ ಕಾರ್ಮಿಕರ ಕಲ್ಯಾಣಕ್ಕೆ ಪ್ರಾಧಿಕಾರ ಸದಾ ಬದ್ಧವಾಗಿದೆ ಎಂದು ತಿಳಿಸಿದರು.

    ಮನೆ ಇಲ್ಲದ ಪೌರಕಾರ್ಮಿಕರಿಗೆ ಪ್ರಾಧಿಕಾರದಿಂದ ಮನೆ ನಿರ್ಮಿಸಿಕೊಡಲು ಉದ್ದೇಶಿಸಲಾಗಿದ್ದು, ಈಗಾಗಲೇ ಬೆಟ್ಟದ ಸರ್ವೇ ನಂ.186ರಲ್ಲಿ ಅರ್ಧ ಎಕರೆ ಜಮೀನನ್ನು ಸರ್ಕಾರ ಖರೀದಿಸಿ ಪ್ರಾಧಿಕಾರಕ್ಕೆ ಮಂಜೂರು ಮಾಡಿದೆ. ಎಸ್‌ಇಪಿ ಯೋಜನೆಯಡಿ 60 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡಲು ಅಗತ್ಯ ಕ್ರಮವಹಿಸಲಾಗಿದೆ ಎಂದರು.

    ಬಳಿಕ ಪ್ರಾಧಿಕಾರದ ಲೆಕ್ಕಪತ್ರ ಶಾಖೆಯಲ್ಲಿ 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಚಂದ್ರಶೇಖರಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಪ್ರಾಧಿಕಾರದ ಅಧಿಕಾರಿಗಳು, ನೌಕರರು ಹಾಗೂ ಪೌರ ಕಾರ್ಮಿಕರು ಹಾಜರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts