More

    ಕೆರೆಗಳ ಅಭಿವೃದ್ಧಿಗೆ ಕ್ರಮ

    ಪಿರಿಯಾಪಟ್ಟಣ: ತಾಲೂಕಿನ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಕೆರೆಗಳನ್ನು ಸರ್ವೆ ಮಾಡಿಸಿ ಹೂಳೆತ್ತುವ ಹಾಗೂ ಕೆರೆ ದುರಸ್ತಿಗೊಳಿಸುವ ಕೆಲಸ ಮಾಡಲಾಗುವುದು ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

    ತಾಲೂಕಿನ ವಿವಿಧ ಗ್ರಾಮಗಳಿಗೆ ಭಾನುವಾರ ಭೇಟಿ ನೀಡಿ, ಚೌತಿ ಗ್ರಾಮದಲ್ಲಿ 20 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

    ಮಳೆಗಾಲ ಆರಂಭವಾಗುವುದರೊಳಗೆ ಹೂಳೆತ್ತುವ ಹಾಗೂ ಕೆರೆ ಅಭಿವೃದ್ಧಿಗೊಳಿಸುವ ಕೆಲಸ ಪೂರ್ಣಗೊಳಿಸಲಾಗುವುದು. ಜೆಜೆಎಂ ಕಾಮಗಾರಿ ಪ್ರಗತಿಯಲ್ಲಿದ್ದು, ಜನರಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ಎಚ್ಚರ ವಹಿಸಲಾಗುವುದು ಎಂದರು. ಚೌತಿ ಗ್ರಾಮದಲ್ಲಿ ಅರ್ಧ ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ಕಲ್ಪಿಸುವುದಾಗಿ ಹೇಳಿದರು.

    ತಿಮಕಾಪುರದಿಂದ ಹೊಸೂರು ಕೆರೆ ಮಾಳದವರೆಗೆ ರಸ್ತೆ ನಿರ್ಮಣಕ್ಕೆ ಅನುದಾನ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದು, ಮುಂದಿನ ಅನುದಾನದಲ್ಲಿ ರಸ್ತೆ ಕಾಮಗಾರಿಗೆ ಕ್ರಮವಹಿಸಲಾಗುವುದು ಎಂದರು.

    ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ಮುಖಂಡ ಬಿ.ಜೆ.ಬಸವರಾಜು, ತಹಸೀಲ್ದಾರ್ ಕುಂಇ ಅಹಮ್ಮದ್, ಗ್ರಾ.ಪಂ. ಅಧ್ಯಕ್ಷ ಪಿ.ಎನ್.ಸ್ವಾಮಿ, ಮಾಜಿ ಅಧ್ಯಕ್ಷ ಬಿ.ಜೆ.ದೇವರಾಜು, ಮುಖಂಡ ಬಸವೇಗೌಡ, ಚೌತಿಮಲ್ಲಣ್ಣ, ಮಲ್ಲೇಶ್, ಮುತ್ತುರಾಜು, ಸಿ.ಎಸ್.ಮಹದೇವ್, ಪಿಡಿಒ ಮೋಹನ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts