Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಕೇಸರಿ ಭಯೋತ್ಪಾದನೆ ಪದ ಪ್ರಯೋಗಿಸಿದ ಕಾಂಗ್ರೆಸ್​ ಕ್ಷಮೆ ಕೇಳಬೇಕು ಎಂದ ಬಿಜೆಪಿ

Monday, 16.04.2018, 7:36 PM       No Comments

ನವದೆಹಲಿ: ಹನ್ನೊಂದು ವರ್ಷ ಹಿಂದಿನ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ಆರೋಪಿಗಳನ್ನು ಬಿಡುಗಡೆಗೊಳಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ತೀರ್ಪನ್ನು ಬಿಜೆಪಿ ಸ್ವಾಗತಿಸಿದ್ದು, ಹಿಂದುಗಳನ್ನು ಅವಮಾನಿಸಿದ್ದಕ್ಕಾಗಿ ಕಾಂಗ್ರೆಸ್​ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.

ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಎನ್​ಐಎ ನ್ಯಾಯಾಲಯ ಸ್ವಾಮಿ ಅಸೀಮಾನಂದ ಮತ್ತು ಇತರ ನಾಲ್ವರನ್ನು ದೋಷಮುಕ್ತಗೊಳಿಸಿದೆ. ಕಾಂಗ್ರೆಸ್​ ಪಕ್ಷ ವೋಟಿಗಾಗಿ ಹಿಂದುಗಳಿಗೆ ಅವಮಾನ ಮಾಡಿತ್ತು. ಹಿಂದು ಭಯೋತ್ಪಾದನೆ ಮತ್ತು ಕೇಸರಿ ಭಯೋತ್ಪಾದನೆ ಎಂಬ ಪದಗಳ ಪ್ರಯೋಗ ಮಾಡಿದ್ದಕ್ಕಾಗಿ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಮತ್ತು ಕಾಂಗ್ರೆಸ್​ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಕ್ಷಮೆ ಕೇಳಬೇಕು ಎಂದು ಬಿಜೆಪಿ ಪಕ್ಷದ ವಕ್ತಾರ ಸಂಬಿತ್​ ಪಾತ್ರಾ ಆಗ್ರಹಿಸಿದ್ದಾರೆ.

ಗಾಳಿಗೆ ತೂರಿ ಹೋದ ಹಿಂದು ಭಯೋತ್ಪಾದನೆಯ ಜೊಳ್ಳು!

ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದಲ್ಲಿ ಆರೋಪಿಗಳನ್ನು ಖುಲಾಸೆ ಮಾಡುವ ಮೂಲಕ ತನ್ನ ಆಡಳಿತಾವಧಿಯಲ್ಲಿ ಯುಪಿಎ ಹುಟ್ಟು ಹಾಕಿದ್ದ ಹಿಂದು ಭಯೋತ್ಪಾದನೆ ಎಂಬುದು ಹುಸಿ ಎಂಬುದು ಸಾಬೀತಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮಾಜಿ ಅಧೀನ ಕಾರ್ಯದರ್ಶಿ ಆರ್.ವಿ.ಎಸ್. ಮಣಿ ಅಭಿಪ್ರಾಯಪಟ್ಟಿದ್ದಾರೆ. ಪ್ರಕರಣದ ತೀರ್ಪು ಹೀಗೆಯೇ ಬರುತ್ತದೆ ಎಂದು ಮೊದಲೇ ತಿಳಿದಿತ್ತು. ನ್ಯಾಯಾಲಯಕ್ಕೆ ಕೃತಕವಾಗಿ ಸೃಷ್ಟಿಸಿದ್ದ ಸಾಕ್ಷ್ಯಗಳನ್ನು ಒದಗಿಸಿದ್ದೇ ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top