

ಬಂಟ್ವಾಳ: ಬಿ.ಸಿ.ರೋಡಿನ ಗಾಣದಪಡ್ಡು ಎಂಬಲ್ಲಿ ಆಟೋ ಇಲೆಕ್ಟ್ರಿಕಲ್ ಕೆಲಸ ವಾಡುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೆಕಾನಿಕ್ ಜಬ್ಬಾರ್ ಎಂಬುವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಗಾಣದಪಡ್ಪು ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಆಟೋ ಇಲೆಕ್ಟ್ರಿಕಲ್ ಉದ್ಯೋಗಿಯಾಗಿದ್ದರು. ಮಂಗಳವಾರ ಬೆಳಗ್ಗೆ ಗಾಣದಪಡ್ಡು ಹೆದ್ದಾರಿ ಬದಿ ಕಾರೊಂದಕ್ಕೆ ಹಾರ್ನ್ ಅಳವಡಿಸುತ್ತಿದ್ದ ವೇಳೆ ವೇಣೂರು ಮೂಲದ ವ್ಯಕ್ತಿಯೋರ್ವ ಬಂಟ್ವಾಳ ಬೈಪಾಸ್ ಕಡೆಯಿಂದ ಕಾರು ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಜಬ್ಬಾರ್ ಗಂಭೀರ ಗಾಯಗೊಂಡಿದ್ದರು. ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.