More

    ಮಾಧ್ಯಮ ಸಿಬ್ಬಂದಿಗೂ ಆರೋಗ್ಯ ನಿಧಿ ವಿಸ್ತರಿಸಿ

    ಬೆಳಗಾವಿ: ಕರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರು, ಪೊಲೀಸ್ ಹಾಗೂ ಪ್ಯಾರಾಮೆಡಿಕಲ್ ಸಿಬ್ಬಂದಿಗೆ ನೀಡುವ ಆರೋಗ್ಯ ಪರಿಹಾರ ನಿಧಿಯನ್ನು ಪತ್ರಕರ್ತರಿಗೂ ವಿಸ್ತರಿಸುವಂತೆ ಒತ್ತಾಯಿಸಿ ಬೆಳಗಾವಿ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಮೂಲಕ ಬುಧವಾರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

    ಮಾಹಾಮಾರಿ ವಿರುದ್ಧ ವರದಿಗಳ ಮೂಲಕ ಹೋರಾಡುತ್ತಿರುವ ಮಾಧ್ಯಮದವರು ಕೂಡ ತಮ್ಮ ಪ್ರಾಣ ಒತ್ತೆ ಇಟ್ಟು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಮಾಧ್ಯಮದವರಿಗೂ ಆರೋಗ್ಯ ಪರಿಹಾರ ನಿಧಿ ವಿಸ್ತರಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮೂಲಕ ವಿನಂತಿಸಲಾಗಿದೆ.

    ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಮಾತನಾಡಿ, ಶೀಘ್ರವೇ ಈ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಬೆಳಗಾವಿ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀಶೈಲ ಮಠದ, ಉಪಾಧ್ಯಕ್ಷ ಮಹೇಶ ವಿಜಾಪುರ, ಕಾರ್ಯಾಧ್ಯಕ್ಷ ಕುಂತಿನಾಥ ಕಲಮನಿ, ಕಾರ್ಯದರ್ಶಿ ಸುರೇಶ ನೇರ್ಲಿ, ಜಂಟಿ ಕಾರ್ಯದರ್ಶಿ ಜಗದೀಶ ವಿರಕ್ತಮಠ, ಅಶೋಕ ಮಗದುಮ್ಮ,
    ವೀರಣ್ಣ ಇನಾಮತಿ, ವಿಶ್ವನಾಥ ದೇಸಾಯಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts