ಬಲ್ಮಠ ಮಹಿಳಾ ಕಾಲೇಜಿನಲ್ಲಿ ಮಾಧ್ಯಮ ಕಾರ್ಯಾಗಾರ

mng-7oct-maadhyama
Published on


ಮಂಗಳೂರು : ಮಾಧ್ಯಮಗಳು ಸಮಾಜದ ಪ್ರಮುಖ ಅಂಗವಾಗಿದ್ದು ಅಭಿವೃದ್ದಿ ಕಾರ್ಯಗಳಿಗೆ ಮಾಧ್ಯಮಗಳ ಸಲಹೆ , ಸಹಕಾರವೂ ಅಗತ್ಯ ಎಂದು ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಮಹಾ ಪ್ರಬಂಧಕ ಅರುಣಪ್ರಭ ಹೇಳಿದರು.
ನಗರದ ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಮತ್ತು ಮೀಡಿಯಾ ಕ್ರಿಯೇಷನ್ಸ್ ಸಹಭಾಗಿತ್ವದಲ್ಲಿ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಮಾಧ್ಯಮ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ಮಹಾ ನಗರ ಪಾಲಿಕೆಯ ಉಪ ಆಯುಕ್ತ ಚಂದ್ರಶೇಖರ್ ಮಾತನಾಡಿ ‘ವಿದ್ಯಾರ್ಥಿಗಳು
ಪ್ರತಿನಿತ್ಯ ದಿನ ಪತ್ರಿಕೆಗಳನ್ನು ಓದುವುದರ ಮೂಲಕ ಸಮಾಜದ ಆಗು ಹೋಗುಗಳನ್ನು ತಿಳಿದು ಕೊಳ್ಳಬೇಕು ಎಂದರು.
ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಬ್ರಾಯನ್ ಪಿಂಟೊ, ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನ್ಯಾಕ್ ಸಂಯೋಜಕಿ ಡಾ.ಮಂಜುಳಾ, ಟೆಕ್ನೊ ಪ್ರೊ ಸಾಫ್ಟ್‌ವೇರ್ ನಿರ್ದೇಶಕ ಜಿ.ಕೆ.ಭಟ್ ಅತಿಥಿಗಳಾಗಿದ್ದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮತ್ತು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ದ.ಕ.ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net