ರಾಸಾಯನಿಕಯುಕ್ತ ಆಹಾರ ಸೇವನೆ ಬದುಕಿಗೆ ಮಾರಕ : ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ ಆಶೀರ್ವಚನ

New Project (3)
Published on

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ

ಮನುಷ್ಯರು ರಾಸಾಯನಿಕ ಯುಕ್ತ ಆಹಾರ ಸೇವಿಸಿ ಆರೋಗ್ಯ ಕೆಡಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಆರೋಗ್ಯ ಸಮೃದ್ಧಿ ಮಾನವನ ಬದುಕಿನ ಅನರ್ಘ ಸಂಪತ್ತು ಎಂಬುದನ್ನು ಎಲ್ಲರೂ ಮನಗಾಣಬೇಕು. ಇದರೊಂದಿಗೆ ಮಕ್ಕಳಿಗೆ ಉತ್ತಮ ಜೀವನ ಶೈಲಿ ತಿಳಿಸುವ ಕಾರ್ಯ ನಡೆಯಬೇಕು ಎಂದು ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಆಶ್ರಯದಲ್ಲಿ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ, ಪ್ರೆಸ್ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಮತ್ತು ಇತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಭಾನುವಾರ ಸುಬ್ರಹ್ಮಣ್ಯದಲ್ಲಿ ವೈದ್ಯಕೀಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಗ್ರಾಮಾಂತರ ಕಾರ್ಯದರ್ಶಿ ಹರೀಶ್ ಬಂಟ್ವಾಳ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅವರನ್ನು ಸನ್ಮಾನಿಸಲಾಯಿತು. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ಸುಜಾತಾ ಕಲ್ಲಾಜೆ, ಕೆ.ವಿ.ಜಿ. ಮೆಡಿಕಲ್ ಕಾಲೇಜು ವೈದ್ಯಾಧಿಕಾರಿ ಡಾ.ರಂಗನಾಥ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೆ.ಯಜ್ಞೇಶ್ ಆಚಾರ್, ಅಯ್ಯಪ್ಪ ಸೇವಾ ಸಂಘ ಅಧ್ಯಕ್ಷ ಉಮೇಶ್ ಕೆ.ಎನ್., ಪ್ರಮುಖರಾದ ಗೀತಾ ರವಿ ಕಕ್ಕೆಪದವು, ಸುಬ್ರಹ್ಮಣ್ಯ ಪ್ರೆಸ್‌ಕ್ಲಬ್ ಅಧ್ಯಕ್ಷ ರತ್ನಾಕರ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಅಧ್ಯಕ್ಷೆ ವಿಮಲಾ ರಂಗಯ್ಯ, ರೋಟರಿ ಕ್ಲಬ್ ಅಧ್ಯಕ್ಷ ಜಯಪ್ರಕಾಶ್ ಆರ್., ಪೂರ್ವಾಧ್ಯಕ್ಷ ಲೋಕೇಶ್ ಬಿ.ಎನ್., ಸೀನಿಯರ್ ಚೇಂಬರ್ ಅಧ್ಯಕ್ಷ ಎಚ್.ಎಲ್.ವೆಂಕಟೇಶ್, ಸಂಘ ಸಂಸ್ಥೆಗಳ ಅಧ್ಯಕ್ಷರಾದ ಅಶೋಕ್ ಕುಮಾರ್ ಮೂಲೆಮಜಲು, ಸಂತೋಪ್ ಕುಲ್ಕುಂದ, ಗುಣವತಿ, ಹರಿಣಿ ಕಲ್ಲಾಜೆ, ಲತಾ ಪ್ರಸಾದ್, ವಾಣಿ ವನಿತಾ ಸಮಾಜದ ಪುಷ್ಪಾ ಕೃಷ್ಣ ಮಣಿಯಾಣಿ ಉಪಸ್ಥಿತರಿದ್ದರು. ಗೌರಿತಾ ಕೆ.ಜಿ. ಪ್ರಾರ್ಥಿಸಿದರು. ವಿಮಲಾ ರಂಗಯ್ಯ ಸ್ವಾಗತಿಸಿದರು. ಜೀವಿತ್ ವಂದಿಸಿದರು. ವಿಶ್ವನಾಥ ನಡುತೋಟ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net