16ರಂದು ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಶಿಬಿರ

medical camp
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ.ಹೆಗ್ಗಡೆ ಹಾಗೂ ಹೇಮಾವತಿ ಹೆಗ್ಗಡೆ ನಿರ್ದೇಶನದಂತೆ ಜೂ.16ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1ರ ವರೆಗೆ ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಲಿದೆ.

ಉಚಿತ ಶ್ರವಣ ಪರೀಕ್ಷೆ, ಮಕ್ಕಳು ಮತ್ತು ವಯಸ್ಕರಲ್ಲಿ ಮೂಗಿನ ದ್ರವ ತಪಾಸಣೆ, ಅಲರ್ಜಿಗೆ ಚಿಕಿತ್ಸೆ, ಮೈಗ್ರೇನ್ ತಲೆನೋವು ಪರೀಕ್ಷೆ, ವೆರ‌್ಟಿಗೋ ಪರೀಕ್ಷೆ ಮತ್ತು ಚಿಕಿತ್ಸೆ, ಧ್ವನಿ ಬದಲಾವಣೆಗಳ ಪರೀಕ್ಷೆ ಮತ್ತು ಚಿಕಿತ್ಸೆ, ಕಿವುಡುತನದ ಪರೀಕ್ಷೆ ಮತ್ತು ಚಿಕಿತ್ಸೆ, ಥೈರಾಯಿಡ್ ಪರೀಕ್ಷೆ ಮತ್ತು ಚಿಕಿತ್ಸೆ, ಕಿವಿ-ಮೂಗು-ಗಂಟಲು ಕ್ಯಾನ್ಸರ್ ತಪಾಸಣೆ, ಗೊರಕೆಗೆ ಚಿಕಿತ್ಸೆ ಇತ್ಯಾದಿ ಸೌಲಭ್ಯಗಳು ಈ ಶಿಬಿರದಲ್ಲಿ ದೊರೆಯಲಿವೆ.

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ.ರೋಹನ್ ಎಂ.ದೀಕ್ಷಿತ್ ರೋಗ ತಪಾಸಣೆ ನಡೆಸಲಿದ್ದಾರೆ. ಡಾ.ರೋಹನ್ ಎಂ.ದೀಕ್ಷಿತ್ ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್ ತಜ್ಞರಾಗಿದ್ದು, ಪ್ರತಿದಿನ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ.

ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತ. ಒಳರೋಗಿ ವಿಭಾಗದಲ್ಲಿ ಶೇ.10, ಔಷಧದಲ್ಲಿ ಶೇ.10, ಲ್ಯಾಬ್‌ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ ಶೇ.20 ರಿಯಾಯಿತಿ ದೊರೆಯಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net