More

    ಮೆಡಿಕಲ್ ಕಾಲೇಜ್ ಆರಂಭಕ್ಕೆ ಕ.ವಿ.ಸೇನೆ ಪಟ್ಟು

    ಚಿತ್ರದುರ್ಗ: ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳ ಗುರುತಿಸಿ, ಭೂಮಿ ಪೂಜೆ ನೆರವೇರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.
    ಪ್ರವಾಸಿ ಮಂದಿರದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕಾಲೇಜು ಆರಂಭಿಸುವುದಾಗಿ ಸರ್ಕಾರ ಸುಳ್ಳು ಹೇಳುತ್ತಲೇ ಕಾಲಹರಣ ಮಾಡುತ್ತಿದೆ ಎಂದು ದೂರಿದರು.
    ಬಜೆಟ್‌ನಲ್ಲಿ ಹಣ ಘೋಷಣೆ ಹೊರತುಪಡಿಸಿ ಕಾಲೇಜ್ ಪ್ರಾರಂಭಕ್ಕೆ ಪ್ರಕ್ರಿಯೆ ಚುರುಕುಗೊಳಿಸಿಲ್ಲ. ಕಾಮಗಾರಿಗಳಿಗೆ ಚಾಲನೆ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಾ ಗೌರಣ್ಣ, ರವಿಕುಮಾರ್ ನಾಯ್ಕ, ಜಗದೀಶ್, ನಾಗರಾಜ್, ಮುತ್ತು, ಅಖಿಲೇಶ್, ಕುಮಾರ್, ಶಿವರಾಜ್, ಗೋಪಿ, ಅವಿನಾಶ್, ಫರ್ಜಾನ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts