More

    ಮೆಡಿಕಲ್ ಕಾಲೇಜಿಗೆ ಅನುದಾನಕ್ಕಾಗಿ ಪ್ರತಿಭಟನೆ

    ಚಿತ್ರದುರ್ಗ: ಈ ಬಾರಿ ಬಜೆಟ್‌ನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಅನುದಾನ ಬಿಡುಗಡೆ ಮಾಡುವಂತೆ ಕರ್ನಾಟಕ ನವ ನಿರ್ಮಾಣ ಸೇನೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಕಾರ‌್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.

    ಕಳೆದ ನವೆಂಬರ್‌ನಲ್ಲಿ ಕಾಲೇಜಿಗೆ 50 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಆನಂತರ ಸಚಿವ ಡಾ.ಸುಧಾಕರ್ ಕಾಲೇಜು ಸ್ಥಾಪನೆ ಪ್ರಸ್ತಾವನೆ ಇಲ್ಲವೆಂದು ಹೇಳಿ ಜಿಲ್ಲೆಯ ಜನರಲ್ಲಿ ನಿರಾಸೆ ಮೂಡಿಸಿದ್ದರು. ಆಗ ಜಿಲ್ಲೆಯ ಬಿಜೆಪಿ ಶಾಸಕರು, ಜಿಲ್ಲಾ ಮಂತ್ರಿ ಮತ್ತೆ ಸರ್ಕಾರದ ಮೇಲೆ ಒತ್ತಡ ಹೇರಿದ್ದರು.

    ಆದ್ದರಿಂದ ಸರ್ಕಾರ ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಕಾಲೇಜು ಸ್ಥಾಪನೆಗೆ ಅನುದಾನ ಬಿಡುಗಡೆ ಮಾಡ ಬೇಕು. ಇಲ್ಲವಾದಲ್ಲಿ ಜಿಲ್ಲೆಯ ಎಲ್ಲ ಶಾಸಕರ ಮನೆ ಎದುರು ಧರಣಿ, ಜಿಲ್ಲಾ ಬಂದ್‌ಗೆ ಕರೆ ನೀಡುವುದಾಗಿ ಎಚ್ಚರಿಸಿದರು.

    ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮುಖಂಡರಾದ ವೀಣಾ ಗೌರಣ್ಣ, ಎಸ್ತೇರ್ ಸುನಂದ್, ರತ್ನಮ್ಮ,ನಾಗೇಂದ್ರಮ್ಮ, ವಿನೋದ, ರಾಜು, ಟಿ.ಆನಂದ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts