More

    ವೈದ್ಯಕೀಯ ಪರೀಕ್ಷೆ ಮುಂದೂಡಲು ಆಗ್ರಹ

    ಬೆಳಗಾವಿ: ಜನವರಿ ತಿಂಗಳಲ್ಲಿ ಹಮ್ಮಿಕೊಂಡಿರುವ ವೈದ್ಯಕೀಯ ಪರೀಕ್ಷೆ ಮುಂದೂಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

    ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಡಿಸೆಂಬರ್ 1ರಿಂದ ವೈದ್ಯಕೀಯ ಕಾಲೇಜ್ ಆರಂಭಿಸುವುದಾಗಿ ಹೇಳಿಕೆ ನೀಡಿದ್ದಾರೆ. ಆದರೆ, 8 ತಿಂಗಳಿಂದ ದೇಶದೆಲ್ಲೆಡೆ ಕರೊನಾ ರೋಗದಿಂದ ಆತಂಕಿತರಾಗಿದ್ದಾರೆ. ಆದರೂ ರಾಜೀವಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್, ತನ್ನ ಸುತ್ತೋಲೆಯಲ್ಲಿ ಜನವರಿ 19ರಿಂದ ವೈದ್ಯಕೀಯ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಇದು ವಿದ್ಯಾರ್ಥಿಗಳಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ಕೇವಲ ಒಂದೂವರೆ ತಿಂಗಳಿನ ಅವಧಿಯಲ್ಲಿ ವೈದ್ಯಕೀಯ ಪರೀಕ್ಷೆಗೆ ಸಿದ್ಧತೆ ನಡೆಸಿ ಬರೆಯುವುದು ಅಸಾಧ್ಯ ಎಂದು ತಿಳಿಸಿದರು.

    ಎಐಡಿಎಸ್‌ಒ ರಾಜ್ಯ ಸಮಿತಿ ನಡೆಸಿದ ಸಮೀಕ್ಷೆಯಲ್ಲಿ ಸುಮಾರು 9,500 ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಶೇ. 97.6 ವಿದ್ಯಾರ್ಥಿಗಳು ಜನವರಿ ತಿಂಗಳಲ್ಲಿ ಪರೀಕ್ಷೆ ಎದುರಿಸಲು ಸಿದ್ಧರಿಲ್ಲ ಎಂದಿದ್ದಾರೆ. ಹಾಗಾಗಿ ನಿರ್ಧಾರ ಹಿಂಪಡೆದು, ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿದರು.

    ಎಐಡಿಎಸ್‌ಒದ ಮಹಾಂತೇಶ ಬಿಳೂರ, ಸನ್ನಿಧಿ ಶಣೈ, ತ್ರಿಭುವನ್ ಕುರಿಬಾಗಿ, ರಜತ್ ಲಟ್ಟೆ, ತರುಣ ಹುಲ್ಲಣ್ಣವರ, ಪ್ರೀತಂ ಮಳಕಾಯಿ, ಪ್ರಣವ್ ಪೀಸೆ, ನಾಗಭೂಷಣ ಜಿಗಜಿಣಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts