ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡ ವೈದ್ಯಕೀಯ ವಿದ್ಯಾರ್ಥಿನಿ

telengara student
Published on

ಹೈದರಾಬಾದ್​: ಖಾಸಗಿ ಹಾಸ್ಟೆಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಪ್ರಾಣ ಬಿಟ್ಟ ಘಟನೆ ತೆಲಂಗಾಣದ ಖಮ್ಮಂನಲ್ಲಿ ನಡೆದಿದೆ.

ಮಾನಸಾ ಮೃತ ವಿದ್ಯಾರ್ಥಿನಿ. ಮಾನಸಾ ಎಂಬಿಬಿಎಸ್ (ಡೆಂಟಲ್) ನಾಲ್ಕನೇ ವರ್ಷ ಓದುತ್ತಿದ್ದಳು. ಖಾಸಗಿ ಹಾಸ್ಟೆಲ್‌ನಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾನಸಾ ಅವರ ಮೃತದೇಹವನ್ನು ಖಮ್ಮಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮಾನಸ ಖಾಸಗಿ ಹಾಸ್ಟೆಲ್​​​ನಲ್ಲಿ ವಾಸವಾಗಿದ್ದಳು. ನಿನ್ನೆ ಸಂಜೆ ತನ್ನ ಕೋಣೆಯಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಕೊಠಡಿಯಿಂದ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಇದನ್ನು ಕಂಡ ವಿದ್ಯಾರ್ಥಿಗಳು ಸ್ಥಳಕ್ಕೆ ಓಡಿ ಬಂದರು. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು.

ಹಾಸ್ಟೆಲ್​​ನ ವಿದ್ಯಾರ್ಥಿಗಳು ಮಾನಸಾ ಬಳಿ ಹೋಗಿ ಬೆಂಕಿ ನಂದಿಸಲು ಯತ್ನಿಸಿದರು. ಆದರೆ ದೇಹವು ಈಗಾಗಲೇ ದೊಡ್ಡ ಪ್ರಮಾಣದಲ್ಲಿ ಸುಟ್ಟುಹೋಗಿತ್ತು. ತೀವ್ರ ಸುಟ್ಟಗಾಯಗಳಾಗಿದ್ದ ಮಾನಸಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಬಳಿಕ ಮಾನಸಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಮಾನಸಾ ಪೋಷಕರಿಗೆ ಮಾಹಿತಿ ನೀಡಲಾಗಿದೆ.

ನಿಜವಾಗಿ ಏನಾಯಿತು? ಮಾನಸಾ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ? ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಯಾವುದೇ ಕೌಟುಂಬಿಕ ಕಲಹಗಳಿವೆಯೇ? ಯಾವುದೇ ವೈಯಕ್ತಿಕ ಸಮಸ್ಯೆಗಳಿವೆಯೇ?  ಎಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net