More

  ಕೊಲೆ ಪ್ರಕರಣದಲ್ಲಿ 13 ಮಂದಿ ಅರೆಸ್ಟ್‌; ದರ್ಶನ್-ಪವಿತ್ರ ಗೌಡ ಬಿಪಿ, ಶುಗರ್, ಹಾರ್ಟ್ ಬೀಟ್ ಚೆಕಪ್

  ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನಟ ದರ್ಶನ್ ಅವರನ್ನು ಬಂಧಿಸಿದ ಬಳಿಕ ಮತ್ತಷ್ಟು ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿರುವ ಪೊಲೀಸರು ಮತ್ತಷ್ಟು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

  ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

  ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ್ದಕ್ಕೆ ರೇಣುಕಾಸ್ವಾಮಿ ಅವರನ್ನು ದರ್ಶನ್‌ ಹಾಗೂ ಅವರ ಸ್ನೇಹಿತರು ಹತ್ಯೆ ಮಾಡಿದ್ದಾರೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 13 ಜನರನ್ನು ಬಂಧಿಸಲಾಗಿದೆ.  

  ಪೊಲೀಸರು ಇಂದು ಸಂಜೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಇದಕ್ಕಾಗಿ, ಪೊಲೀಸ್‌ ಠಾಣೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಈಗಾಗಲೇ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರ ತಪಾಸಣೆ ಮುಗಿದಿದೆ. ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ಕೈಗೊಳ್ಳುತ್ತಿದ್ದಾರೆ.

  ನಟ ದರ್ಶನ್ ಹಾಗೂ ಪವಿತ್ರಗೌಡ ವೈದ್ಯಕೀಯ ಪರೀಕ್ಷೆ ಮುಕ್ತಾಯವಾಗಿದೆ. ಕೇವಲ ಬಿಪಿ, ಶುಗರ್, ಹಾರ್ಟ್ ಬೀಟ್ ಮಾತ್ರ ಚೆಕ್ ಮಾಡಿದ್ದಾರೆ. ಮಲ್ಲತ್ ಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರಿಂದ ವೈದ್ಯಕೀಯ ಪರೀಕ್ಷೆ ನಡೆದಿದೆ. ಉಳಿದ ಆರೋಪಿಗಳನ್ನು ಪೊಲೀಸರು ಈಗಾಗಲೇ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ. ಕೇವಲ ದರ್ಶನ್ ಹಾಗೂ ಪವಿತ್ರಗೌಡ ವೈದ್ಯಕೀಯ ಪರೀಕ್ಷೆ ಮಾತ್ರ ಬಾಕಿ ಇತ್ತು. ಹೀಗಾಗಿ ಇಬ್ಬರು ವೈದ್ಯಕೀಯ ಪರೀಕ್ಷೆ ವೈದ್ಯರು ಹೊರಟಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts