More

    ವೈದ್ಯಕೀಯ ತಪಾಸಣೆಗೆ ಬಂದ ಸಿಡಿ ಲೇಡಿ

    ಬೆಂಗಳೂರು: ಸಿಡಿ ಕೇಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಹಾಜರಾಗಿದ್ದಾಳೆ.

    ಬೌರಿಂಗ್ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರು ಸಾಮಾನ್ಯ ವೈದ್ಯಕೀಯ ಪರೀಕ್ಷೆ ನಡೆಸುತ್ತಿದ್ದಾರೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಲು ವಿಕ್ಟೋರಿಯಾ ಆಸ್ಪತ್ರೆ‌ಗೆ ಕರೆದೊಯ್ಯುವ ಸಾಧ್ಯತೆಗಳಿವೆ. ಇದಾದ ಬಳಿಕ ಯುವತಿಯ ಧ್ವನಿ ಪರೀಕ್ಷೆ ನಡೆಸಲು ಎಸ್‌ಐಟಿ ಮುಂದಾಗಿದೆ ಎನ್ನಲಾಗಿದೆ. ಆಡುಗೋಡಿ ಟೆಕ್ನಿಕಲ್ ‌ವಿಭಾಗಕ್ಕೆ ವಿಚಾರಣೆಗೆ ಹಾಜರಾದ ಬಳಿಕ ಎಸ್‌ಐಟಿ ಮುಂದಿನ ನಡೆ ಏನು ಎಂಬುದು ಗೊತ್ತಾಗಲಿದೆ. ಇದನ್ನೂ ಓದಿರಿ ನಾನು ನಂದಿ ಅಲ್ಲ, ಜಗದೀಶ! ನಾನು ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ: ಸಿಡಿ ಲೇಡಿ ವಕೀಲನ ಎಚ್ಚರಿಕೆ ಯಾರಿಗೆ?

    ಮಂಗಳವಾರ ಸಂತ್ರಸ್ತೆ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸಿದ್ದು, ನಂತರ ಎಸ್​ಐಟಿ ಅಧಿಕಾರಿಗಳು ಯುವತಿಯನ್ನ ಆಡುಗೋಡಿಯ ಟೆಕ್ನಿಕಲ್ ಸೆಲ್​ಗೆ ಕರೆದೊಯ್ದು ಸಿಆರ್​ಪಿಸಿ 161 ಅಡಿ ಹೇಳಿಕೆಗಳನ್ನ ಪಡೆದಿದ್ದರು. ಬುಧವಾರವೂ ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತೆಗೆ ನೋಟಿಸ್ ನೀಡಲಾಗಿದೆ. ಹೀಗಾಗಿ ವೈದ್ಯಕೀಯ ಪರೀಕ್ಷೆಯ ಬಳಿಕ ಆಡುಗೋಡಿ ಟೆಕ್ನಿಕಲ್ ‌ವಿಭಾಗಕ್ಕೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಗಳಿವೆ.

    28 ದಿನಗಳ ಬಳಿಕ ಅಜ್ಞಾತವಾಸದಿಂದ ಯುವತಿ ಹೊರ ಬಂದಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ಸೌಮೇಂದು ಮುಖರ್ಜಿ ಹಾಗೂ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿ ರವಿ ಕುಮಾರ್ ಸಮ್ಮುಖದಲ್ಲಿ ಪ್ರಕರಣದ ತನಿಖಾಧಿಕಾರಿ ಕವಿತಾ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

    ನಾನು ನಂದಿ ಅಲ್ಲ, ಜಗದೀಶ! ನಾನು ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ: ಸಿಡಿ ಲೇಡಿ ವಕೀಲನ ಎಚ್ಚರಿಕೆ ಯಾರಿಗೆ?

    ಮೂರು ಪುಟ್ಟ ಕಂದಮ್ಮಗಳ ಕಣ್ಣೆದುರಲ್ಲೇ ತಾಯಿ ದುರಂತ ಸಾವು! ‘ನನ್ನನ್ನು ಎತ್ತಿಕೊಳ್ಳಮ್ಮಾ…’ ಎಂದು ಶವದ ಮುಂದೆ ಕಣ್ಣೀರಿಟ್ಟ ಮಕ್ಕಳು

    28 ದಿನದ ಬಳಿಕ ಕೋರ್ಟ್​ನಲ್ಲಿ ಸಿಡಿ ಲೇಡಿ ಪ್ರತ್ಯಕ್ಷ! ರಮೇಶ್​ ಜಾರಕಿಹೊಳಿ ಎದೆಯಲ್ಲಿ ಢವಢವ

    ಪತಿಯನ್ನ ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ! ಬೇಲ್​ ಮೇಲೆ ಹೊರ ಬಂದವಳಿಂದ ಮತ್ತೊಂದು ನೀಚ ಕೃತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts