More

    ಔಷಧ ಗಿಡ ನಾಟಿ ಕಾರ್ಯ ಮಾದರಿ: ಕುಕ್ಕೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

    ಸುಬ್ರಹ್ಮಣ್ಯ: ಮರೆಯಾಗುತ್ತಿರುವ ಅನೇಕ ಔಷಧ ಸಸ್ಯಗಳನ್ನು ತಂದು ನೆಡುವ ಕಾರ್ಯಮಾದರಿ ಎಂದು ಮುಜರಾಯಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಹಮ್ಮಿಕೊಂಡಿದ್ದ ವನ ಸಂವರ್ಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಮಾತನಾಡಿ, ಇದು ಭಕ್ತರ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮಹತ್ತರ ಚಿಂತನೆಯಾಗಿದೆ ಎಂದರು.

    ಶಾಸಕರಾದ ಹರೀಶ್ ಪೂಂಜ, ರಾಜೇಶ್ ನಾಕ್, ಉಮಾನಾಥ ಕೋಟ್ಯಾನ್, ರಾಜ್ಯ ಮುಜರಾಯಿ ಆಯುಕ್ತೆ ರೋಹಿಣಿ ಸಿಂಧೂರಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್, ಗೋವಿಂದ ಭಟ್, ಉಪಅರಣ್ಯ ಸಂರಕ್ಷಣಾಧಿಕಾರಿ ಕಾರಿಯಪ್ಪ, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಚಂದ್ರಶೇಖರ ತಳೂರು, ಜಿ.ಪಂ.ಮಾಜಿ ಸದಸ್ಯೆ ಆಶಾ ತಿಮ್ಮಪ್ಪ, ನಿವೃತ್ತ ಅಧ್ಯಾಪಕ ಶಿವರಾಮ ಗೌಡ, ಪುತ್ತೂರು ಜಿಲ್ಲಾ ಕಾರ್ಯವಾಹ ಡಾ.ಮನೋಜ್, ಮಂಗಳೂರು ವಿಭಾಗ ಸೇವಾ ಪ್ರಮುಖ್ ಸುಭಾಶ್‌ಚಂದ್ರ ಕಳಂಜ ಸೇರಿದಂತೆ 14 ಗಣ್ಯರು ಕುಕ್ಕೆಯ 14 ಕೇಂದ್ರಗಳಲ್ಲಿ ಸಸಿ ನೆಟ್ಟು ವನ ಸಂವರ್ಧನಾ ಅಭಿಯಾನಕ್ಕೆ ಚಾಲನೆ ನೀಡಿದರು.

    ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್, ಧಾರ್ಮಿಕ ದತ್ತಿ ಇಲಾಖೆಯ ಕೇಂದ್ರ ಸ್ಥಾನೀಯ ಸಹಾಯಕ ಅಭಿಜಿನ್, ಉಪ ಆಯುಕ್ತ ಜಯಪ್ರಕಾಶ್, ಸಹಾಯಕ ಆಯುಕ್ತ ಸಣ್ಣ ರಂಗಯ್ಯ, ಕುಕ್ಕೆ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ರಾವ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಜಾ ವಿ.ಭಟ್, ಪ್ರಸನ್ನ ದರ್ಬೆ, ಮನೋಹರ ರೈ, ಶೋಭಾ ಗಿರಿಧರ್, ಲೋಕೇಶ್ ಮುಂಡೋಕಜೆ, ಶ್ರೀವತ್ಸ, ಮಾಸ್ಟರ್ ಪ್ಲಾನ್ ಸದಸ್ಯರಾದ ಮನೋಜ್ ಸುಬ್ರಹ್ಮಣ್ಯ, ಚಂದ್ರಶೇಖರ ಮರ್ಧಾಳ, ಕಿಶೋರ್ ಕುಮಾರ್ ಕೂಜುಗೋಡು, ಚಂದ್ರಶೇಖರ ನಲ್ಲೂರಾಯ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts