ರಾಣೆಬೆನ್ನೂರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಪ್ರದೇಶದಲ್ಲಿರುವ ಬಡ ಕುಟುಂಬಗಳಿಗೆ ಆಥಿರ್ಕವಾಗಿ ಅಭಿವೃದ್ಧಿಯಾಗಲು ಬೇಕಾದ ಎಲ್ಲ ಸೌಲಭ್ಯ ಒದಗಿಸುತ್ತಿದೆ. ಜನತೆ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ಸಮಿತಿಯ ಸದಸ್ಯ ಬಸವರಾಜ ಹುಲ್ಲತ್ತಿ ಹೇಳಿದರು.
ತಾಲೂಕಿನ ಮೇಡ್ಲೇರಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಮೆಡ್ಲೇರಿ ವಲಯ ಮಟ್ಟದ ಮಹಾಲಕ್ಷಿ$್ಮ ಪೂಜೆ ಹಾಗೂ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮನುಷ್ಯನ ಮನಸ್ಥಿತಿಯನ್ನು ಸಮತೋಲನದಲ್ಲಿ ಇಟ್ಟುಕೊಳ್ಳಲು ಧಾಮಿರ್ಕ ಕಾರ್ಯಕ್ರಮವು ಒಂದಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಜನರ ಅಸ್ಥಿತ್ವವನ್ನು ಜಾಗೃತಗೊಳಿಸುವಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಉತ್ತಮ ಮಾದರಿಯಾಗಿದೆ ಎಂದರು.
ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು ಮಾತನಾಡಿ, ಯೋಜನೆಯಲ್ಲಿ ಹಲವಾರು ಕಾರ್ಯಕ್ರಮಗಳು ಹಮ್ಮಿಕೊಳ್ಳುತ್ತಿದ್ದೂ ವಾತ್ಸಲ್ಯ ಕಾರ್ಯಕ್ರಮದಡಿ ನಿರ್ಗತಿಕರಿಗೆ ಪ್ರತಿ ತಿಂಗಳು 1 ಸಾವಿರ ರೂ. ಮಾಶಾಸನ ನೀಡುವುದು, ಸೂರಿಲ್ಲದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಮನೆ ರಚನೆ ಮಾಡುವುದು, ಕೆರೆ ಹೂಳೆತ್ತುವುದು, ರುದ್ರ ಭೂಮಿ ರಚನೆಗೆ ಅನುಧಾನ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುಧಾನ ನೀಡುತ್ತಾ ಬಂದಿದೆ ಎಂದರು.
ರಟ್ಟಿಹಳ್ಳಿಯ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಗ್ರಾಪಂ ಅಧ್ಯಕ್ಷೆ ಬಸವಣ್ಣೆವ್ವ ಮಾಳಗಿ, ಪ್ರಮುಖರಾದ ದಿಳ್ಳೆಪ್ಪ ಅಣ್ಣೇರ, ರಾಜೇಂದ್ರ ಅಂಬಿಗೇರ, ಅನಂತ ಕರೆಣ್ಣನವರ ಮತ್ತಿತರರು ಉಪಸ್ಥಿತರಿದ್ದರು.
ಯೋಜನೆಯ ಸದುಪಯೋಗ ಪಡೆದುಕೊಳ್ಳಿ; ಬಸವರಾಜ ಹುಲ್ಲತ್ತಿ

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?
Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…
ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels
Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…
ಪ್ಲಾಸ್ಟಿಕ್ ಬಾಕ್ಸ್ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes
hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…