More

    ಕನಿಷ್ಠ ಬೆಂಬಲ ಬೆಲೆ ಗ್ಯಾರಂಟಿ ಈಡೇರಿಸಿ

    ಹೊಸನಗರ: ಬರ ಪರಿಹಾರ, ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಗ್ಯಾರಂಟಿ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

    ರಾಜ್ಯದಲ್ಲಿ ಬರಪೀಡಿತ ತಾಲೂಕು ಎಂದು ಘೋಷಣೆ ಆಗಿದೆಯೇ ಹೊರತು ಇಲ್ಲಿತನಕ ಬಿಡಿಗಾಸು ಪರಿಹಾರ ನೀಡಿಲ್ಲ. ಜಲದ ಸೆಲೆಗಳು ಬಿತ್ತಿ ಹೋಗಿ ರೈತರು ಕಂಗಾಲಾಗಿದ್ದಾರೆ. 7 ಗಂಟೆ ನಿರಂತರ ತ್ರೀ ಫೇಸ್ ವಿದ್ಯುತ್ ನೀಡುವುದಾಗಿ ಘೋಷಿಸಿರುವ ಸರ್ಕಾರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸರಬರಾಜು ಇಲ್ಲದೆ ತೋಟಗಳು ಒಣಗುತ್ತಿವೆ ಎಂದು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವಾಟಗೋಡು ಸುರೇಶ ದೂರಿದರು.
    ರಾಜ್ಯ ಉಪಾಧ್ಯಕ್ಷ ರಾಜು ಹಿಟ್ಟೂರು ಮಾತನಾಡಿ, ಬರಗಾಲ ಪೀಡಿತ ಪ್ರದೇಶದ ರೈತರಿಗೆ ಸ್ವಾಮಿನಾಥನ್ ವರದಿಯಂತೆ ಪರಿಹಾರ ನೀಡಬೇಕು. ಸಹಕಾರ ಬ್ಯಾಂಕ್‌ಗಳಲ್ಲಿ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಯೋಜನೆಯು ಮುಂದಿನ ಬೆಳೆ ಕೈಗೆ ಬರುತನಕ ಮುಂದುವರಿಸಬೇಕು. ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯ 100 ದಿನಗಳ ಕೂಲಿಯನ್ನು 150 ದಿನಗಳವರೆಗೆ ವಿಸ್ತರಿಸಬೇಕು. ರೈತರ ಅಕ್ರಮ ಪಂಪ್‌ಸೆಟ್‌ಗಳನ್ನು ಸಕ್ರಮ ಮಾಡಬೇಕು. ಮುಳುಗಡೆ ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡಬೇಕು. ಬಗರ್ ಹುಕುಂ ಜಮೀನುಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.
    ರೈತ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಹಾರೋಬೆನವಳ್ಳಿ, ಪ್ರಧಾನ ಕಾರ್ಯದರ್ಶಿ ಜಗದೀಶ ಮೈಸವಳ್ಳಿ, ಜಿಲ್ಲಾ ಉಪಾಧ್ಯಕ್ಷ ಗುರುಪಾದಪ್ಪ ಗೌಡ, ರಾಜಪ್ಪ ಗೌಡ, ಹಸಿರು ಸೇನೆ ಸಂಚಾಲಕ ಎಂ.ಡಿ.ನಾಗರಾಜ ಪುರದಾಳು, ತಾಲೂಕು ಅಧ್ಯಕ್ಷ ರವೀಂದ್ರ ಮಾಸ್ತಿಕಟ್ಟೆ, ಪ್ರಧಾನ ಕಾರ್ಯದರ್ಶಿ ಸುಗಂಧರಾಜ್, ವೈ.ಭಾಸ್ಕರ್ ಜೋಯ್ಸ, ಸಹಕಾಯದರ್ಶಿ ಈಶ್ವರಪ್ಪ ಕುಕ್ಕಳಲೆ, ಅಮ್ಮುಗಡ್ಡೆ ಭಾಸ್ಕರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts