ಮೂಡುಬಿದಿರೆ: ನಮ್ಮ ಮಕ್ಕಳು ವಿದ್ಯೆ ಕಲಿತು ಒಳ್ಳೆಯ ಉದ್ಯೋಗ ದೊರಕಿಸಿಕೊಳ್ಳುವುದು ತಪ್ಪಲ್ಲ. ಅದರ ಜತೆಗೆ ಅವರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಬೆಳೆಸಿ ಹವ್ಯಾಸವನ್ನಾಗಿ ಮಾಡಿಕೊಳ್ಳುವಂತೆ ಪ್ರೇರಣೆ ನೀಡಬೇಕು ಎಂದು ಉದ್ಯಮಿ ರಾಜೇಂದ್ರ ಕುಮಾರ್ ಹೇಳಿದರು.
ಸಮಾಜ ಮಂದಿರದಲ್ಲಿ ಶನಿವಾರ ನಡೆದ ಮೂಡುಬಿದಿರೆ ಕೃಷಿ ವಿಚಾರ ವಿನಿಮಯ ಕೇಂದ್ರದ ಮಾಸಿಕ ಸಭೆ ಉದ್ಘಾಟಿಸಿ ಮಾತನಾಡಿದರು.
ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಎಸ್.ಪಿ., ಮಂಗಳೂರಿನ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಮಂಜುನಾಥ್, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಕೃಷಿ ವಿಭಾಗದ ಪ್ರಾಧ್ಯಾಪಕ ಡಾ.ರಾಹುಲ್ ಪಾಠಕ್ ಸಂಪನ್ಮೂಲ ವ್ಯಕ್ತಿಯಾಗಿದ್ದರು.
ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಸದಾನಂದ ನಾರಾವಿ ಸ್ವಾಗತಿಸಿದರು. ಕೃಷಿ ವಿಚಾರ ವಿನಿಮಯ ಕೇಂದ್ರ ಅಧ್ಯಕ್ಷ ಬಿ.ಅಭಯ ಕುಮಾರ್ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಹರೀಶ್ ಕೋಟ್ಯಾನ್ ವರದಿ ವಾಚಿಸಿದರು. ಗುಣಪಾಲ ಮುದ್ಯ ನಿರೂಪಿಸಿದರು. ರಾಜವರ್ಮ ಬೈಲಂಗಡಿ ವಂದಿಸಿದರು.
ಪೊಲೀಸ್ ಆಯುಕ್ತರ ವರ್ಗಾವಣೆಗೆ ಸಿಪಿಎಂ ಪಟ್ಟು : ಗುರುಪುರ ಕೈಕಂಬದ ಜಂಕ್ಷನ್‌ನಲ್ಲಿ ಪ್ರತಿಭಟನೆ