ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ : ಮೂಲ್ಕಿ ಪೊಲೀಸ್ ನಿರೀಕ್ಷಕ ಮಂಜುನಾಥ್ ಬಿ.ಎಸ್. ಆಶಯ

New Project (25)
Published on

ಮೂಲ್ಕಿ: ಅಪರಿಚಿತರು ಮತ್ತು ಅನುಮಾನಾಸ್ಪದ ವ್ಯಕ್ತಿಗಳು ಕಂಡ ಕೂಡಲೇ ಪೊಲೀಸರಿಗೆ ತಿಳಿಸುವ ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳುವ ಮೂಲಕ ಅಪರಾಧಗಳ ತಡೆಗೆ ಸಹಕರಿಸಬೇಕು ಎಂದು ಮೂಲ್ಕಿ ಪೊಲೀಸ್ ನಿರೀಕ್ಷಕ ಮಂಜುನಾಥ್ ಬಿ.ಎಸ್. ಹೇಳಿದರು.

ಬಪ್ಪನಾಡು ದೇವಸ್ಥಾನದ ಸಭಾಭವನದಲ್ಲಿ ಮಂಗಳೂರು ಉತ್ತರ ವಿಭಾಗದ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ಯಾಂಕ್, ಕೋ ಆಪರೇಟಿವ್ ಸೊಸೈಟಿ, ಜುವೆಲ್ಲರಿ ಶಾಪ್, ದೇವಸ್ಥಾನ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದರು.

ಪ್ರತಿಯೊಂದು ಬ್ಯಾಂಕ್ ಉದ್ಯಮ, ಸಂಘ-ಸಂಸ್ಥೆ ಹಾಗೂ ದೇವಸ್ಥಾದಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಬೇಕು ಹಾಗೂ ರಕ್ಷಣೆಗಾಗಿ ಕಾವಲುಗಾರರನ್ನು ನೇಮಿಸಬೇಕು. ಮಹಿಳೆಯರು ತಮ್ಮ ಚಿನ್ನಾಭರಣಗಳ ಬಗ್ಗೆ ಜಾಗ್ರತೆ ವಹಿಸಬೇಕು, ಠಾಣಾ ವ್ಯಾಪ್ತಿಯಲ್ಲಿ ನಡೆಯುವ ಅಪರಾಧಗಳಿಂದ ರಕ್ಷಣೆಗಾಗಿ ಜನರಿಗೆ ಮಾಹಿತಿ ನೀಡಲು ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಪೊಲೀಸ್ ಠಾಣೆ ಎಸ್‌ಐ ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net