More

    ಬೆಂಗಳೂರಲ್ಲಿ ಶೋಷಿತರ ಸಂಕಲ್ಪ ಸಮಾವೇಶ: ಒಕ್ಕೂಟದ ಮುಖ್ಯ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ ಮಾಹಿತಿ

    ಮಂಡ್ಯ: ಮಾರ್ಚ್ ಕೊನೆಯ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಶೋಷಿತರ ಸಂಕಲ್ಪ ಸಮಾವೇಶ ನಡೆಸಲಾಗುವುದು ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮುಖ್ಯ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ ತಿಳಿಸಿದರು.
    ನಗರದ ಕನಕ ಸಮುದಾಯ ಭವನದಲ್ಲಿ ಆಯೋಜಿಸಿದ್ದ ವಿವಿಧ ಸಮುದಾಯದ ಮುಖ್ಯಸ್ಥರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಹಿಂದುಳಿದ ಜಾತಿಗಳಿಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಹಳ್ಳಿಗಳಲ್ಲಿ ಅರಿವು ಮೂಡಿಸುವ ಅಗತ್ಯತೆ ಇದೆ. ಹಿಂದುಳಿದ ವರ್ಗಗಳು ಹಾಗೂ ದಲಿತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಶೋಷಿತ ವರ್ಗಗಳ ಸಮಾವೇಶ ಕೂಡಲೇ ಆಗಬೇಕು. ಆಗ ಮಹಾ ಒಕ್ಕೂಟವನ್ನು ಬಲಿಷ್ಠಗೊಳಿಸಿ ಗ್ರಾಮೀಣ ಪ್ರದೇಶದಲ್ಲಿ ವಿಚಾರಗಳನ್ನು ತಿಳಿಸುವ ಕೆಲಸ ಮಾಡಬೇಕಾಗಿದೆ. 2023ರ ಚುನಾವಣೆ ಮುಗಿದ ಕೂಡಲೇ ಶೋಷಿತ ವರ್ಗಗಳ ಮೀಸಲಾತಿ ಕಿತ್ತುಹಾಕುವ ಹುನ್ನಾರ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಶೋಷಿತ ಸಮುದಾಯಗಳು ಸಂಘಟಿತರಾಗಬೇಕು ಎಂದು ಹೇಳಿದರು.
    ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಅಸಂವಿಧಾನಿಕ ಮಾತುಗಳ ಮೂಲಕ ಸಿದ್ದರಾಮಯ್ಯ ಅವರನ್ನು ಅವಮಾನಿಸುತ್ತಿರುವ ಕೆಲಸ ಮಾಡಲಾಗುತ್ತಿದೆ. ತಳ ಸಮುದಾಯಗಳಿಗೆ ಸಾಮಾಜಿಕ ನ್ಯಾಯಕ್ಕಾಗಿ ಬದ್ಧರಾಗಿರುವ ಅವರು ದೇಶ ಹಾಗೂ ರಾಜ್ಯಕ್ಕೆ ಅತ್ಯಾವಶ್ಯಕ ಎಂದರು.
    ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಚ್.ನಾಗರಾಜು, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್, ಶೋಷಿತ ಸಮುದಾಯಗಳ ಮುಖಂಡರಾದ ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರಗೋಡು, ಎಲ್.ಸಂದೇಶ್, ವೆಂಕಟೇಶ್, ಅಮ್ಜದ್ ಪಾಷ, ಸತೀಶ್, ರಾಜಣ್ಣ, ಸಾತನೂರು ಕೃಷ್ಣ, ದೀಪಕ್, ಆನಂದ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts