More

    ಕಾಂಗ್ರೆಸ್ ಕೈ ಹಿಡಿಯಲಿವೆ ಪಂಚ ಗ್ಯಾರಂಟಿಗಳು

    ಸಕಲೇಶಪುರ: ಜಿಲ್ಲೆಯಲ್ಲಿ ಜಿಡ್ಡುಗಟ್ಟಿರುವ ರಾಜಕೀಯವನ್ನು ತಿಳಿಗೊಳಿಸಲು ಹಾಸನ ಲೋಕಸಭಾ ಕ್ಷೇತ್ರದ ಜನತೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಹೇಳಿದರು.

    ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ರಾಜಕೀಯ ಆಡಳಿತ ಹಲವು ದಶಕಗಳಿಂದ ಒಂದೇ ಕುಟುಂಬದ ಕೈಯಲ್ಲಿ ಸಿಲುಕಿ ಜಡ್ಡುಗಟ್ಟಿದೆ. ಇದನ್ನು ಬದಲಿಸುವ ಅವಕಾಶ ಸದ್ಯ ಹಾಸನ ಲೋಕಸಭಾ ಕ್ಷೇತ್ರದ ಜನತೆಗೆ ಈ ಬಾರಿ ದಕ್ಕಿದೆ. ಈ ಅವಕಾಶ ಕೈಚಲ್ಲಬಾರದು ಎಂದು ಮನವಿ ಮಾಡಿದರು.

    ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಂದಿರುವ ಐದು ಗ್ಯಾರಂಟಿಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಕೈಹಿಡಿಯಲಿದ್ದು, ಪ್ರತಿಯೊಬ್ಬ ಕಾರ್ಯಕರ್ತ ಕೂಡ ನಾನೇ ಅಭ್ಯರ್ಥಿ ಎಂದು ಭಾವಿಸಿ ಪ್ರಚಾರ ನಡೆಸಬೇಕು. ಸರ್ವ ಜನಾಂಗಕ್ಕೂ ಸಾಮಾಜಿಕ ನ್ಯಾಯ ನೀಡುವ ಪಕ್ಷ ಕಾಂಗ್ರೆಸ್ ಮಾತ್ರ. ಕಳೆದ ಬಾರಿ ಆಯ್ಕೆಯಾಗಿರುವ ಸಂಸದರು ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ತಪ್ಪು ಮಾಡಿದ್ದಾರೆಂದು ಆ ಪಕ್ಷದ ವರಿಷ್ಠರೇ ಹೇಳಿದ್ದು, ಮತ್ತೊಂದು ಅವಕಾಶ ನೀಡಿದರೆ ತಪ್ಪು ಸರಿಪಡಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ. ಆದ್ದರಿಂದ ಎದುರಾಳಿ ಅಭ್ಯರ್ಥಿಯ ವೈಫಲ್ಯವನ್ನು ಜನರಿಗೆ ವಿವರಿಸುವ ಮೂಲಕ ತಮ್ಮಲ್ಲಿರುವ ಭಿನ್ನಾಭಿಪ್ರಾಯ ಬದಿಗೊತ್ತಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್ ಗೆಲುವಿಗೆ ಕೆಲಸ ಮಾಡಬೇಕು ಎಂದರು.

    ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮಾತನಾಡಿ, ಈ ಲೊಕಸಭಾ ಚುನಾವಣೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಳಿವು-ಉಳಿವನ್ನು ನಿರ್ಧರಿಸಲಿದೆ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಉತ್ತಮವಾಗಿದೆ. ಆದರೆ ಭಿನ್ನಾಭಿಪ್ರಾಯದಿಂದಲೇ ಪ್ರತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸೋಲು ಅನುಭವಿಸುತ್ತಿದ್ದಾರೆ. ದಿ.ಪುಟ್ಟಸ್ವಾಮಿಗೌಡರಂತೆ ಜಿಲ್ಲೆಯಲ್ಲಿ ಕೆಲಸ ಮಾಡಲಿದ್ದು, ಮಲೆನಾಡ ಭಾಗದ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದೇನೆ. ಈ ಬಾರಿ ಕಾಂಗ್ರೆಸ್ ಗೆಲುವಿಗೆ ಉತ್ತಮ ವಾತಾವರಣವಿದ್ದು, ದಯವಿಟ್ಟು ಎಲ್ಲರೂ ತಮ್ಮ ನಡುವಿನ ಭಿನ್ನಾಭಿಪ್ರಾಯ ಬದಿಗೊತ್ತಿ ಕೆಲಸ ಮಾಡಬೇಕು ಎಂದರು.
    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರಮುಡಿಚಂದ್ರು ಮಾತನಾಡಿದರು. ಮಾಜಿ ಶಾಸಕ ಪುಟ್ಟೆಗೌಡ, ಮುಖಂಡರಾದ ಮುರಳಿಮೋಹನ್, ಸಲೀಂ ಕೊಲ್ಲಹಳಿ, ಬೈಕೆರೆ ದೇವರಾಜ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts