More

    ಉಡುಪಿ ಜಿಲ್ಲೆ ಮರಳು, ಕೆಂಪುಕಲ್ಲಿನ ಗಣಿಗಾರಿಕೆ ಕುರಿತು ಸಭೆ, ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು:
    ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಹಾಗೆಯೇ ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
    ವಿಧಾನಸೌಧದ ಕಮಿಟಿ ರೂಂನಲ್ಲಿ ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್‌ಗಳಿಗೆ ಅನುಮತಿ ಪತ್ರ ದೊರೆಯುತ್ತದೆ ಎಂದರು.
    ಪ್ರಾಧಿಕಾರದ ತಿಂಗಳಿಗೊಮ್ಮೆ ಸಭೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಸಿಎಂ, ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದರು.
    ಹೊಸ ಮರಳು ನೀತಿ 2020 ನ್ನು 1.12.2021 ರಂದು ಜಾರಿಗೆ ತಂದಿದ್ದು, ಸಣ್ಣ ಬ್ಲಾಕ್‌ಗಳಿವೆ. ಕಟ್ಟಡ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹಿತಾಸಕ್ತಿ ಯನ್ನೂ ಕಾಪಾಡಬೇಕಿದೆ . ಕಾರ್ಮಿಕರಿಗೆ ಸಮಸ್ಯೆಯಾಗದಂತೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.

    30 ಬ್ಲಾಕ್ ಹರಾಜು ಪ್ರಕ್ರಿಯೆ:
    ಘೆಟ್ಞ ಇ್ಕಘ ಪ್ರದೇಶದಲ್ಲಿ ಟೆಂಡರ್ ಕಂ ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು 39 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಈ ಪೈಕಿ 9 ಬ್ಲಾಕ್‌ಗಳ ಟೆಂಡರ್ ಪ್ರಕ್ರಿಯೆ ಯಶಸ್ವಿಯಾಗಿದ್ದು, 30 ಮರಳು ಬ್ಲಾಕ್‌ಗಳಿಗ ಮರುಹಾರಾಜು ಪ್ರಕ್ರಿಯೆ ಶೀಘ್ರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಭೆಗೆ ಮಾಹಿತಿ ಒದಗಿಸಿದರು.

    8 ಲಕ್ಷ ಟನ್ ಮರಳು ಅಗತ್ಯವಿದೆ. ಜೆಲ್ಲಿ, ಕೆಂಪುಕಲ್ಲಿನ ಸಮಸ್ಯೆ ಇದೆ. ಮಂಗಳೂರು, ಉಡುಪಿ ಹವಾಗುಣಕ್ಕಾಗಿ ಗೃಹನಿರ್ಮಾಣಕ್ಕೆ ಬಳಕೆಯಾಗುತ್ತದೆ. ಇದರಲ್ಲಿ ಬಾಕ್ಸೈಟ್ ಇದೆ ಎಂಬ ಕಾರಣಕ್ಕೆ ಕೈಗಾರಿಕೆಗಳು ಇದನ್ನು ಬಳಸುತ್ತವೆ. ಜಿಲ್ಲೆಯಿಂದ ಹೊರಗೆ ಕಳಿಸುವುದು ಬೇಡ ಎಂಬ ಅಭಿಪ್ರಾಯ ಜನರಲ್ಲಿದೆ. ಮರಳು ಗಣಿಗಾರಿಕೆಗೆ ಪರವಾನಗಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಪರವಾನಗಿ ನೀಡಲಿ. ಮನೆ ಕಟ್ಟಲು ಅಗತ್ಯವಿರುವ ಸೈಜುಗಲ್ಲುಗಳಿಗೆ ಗಣಿಗಾರಿಕೆ ಮಾಡಲು ಕಾಯ್ದೆಯ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಮುಖಂಡರು ಮನವಿ ಮಾಡಿದರು.

    71 ಕಾರ್ಯಾದೇಶ:

    ಕೆಂಪುಕಲ್ಲಿನ( ಔಠಿಛ್ಟಿಜಿಠಿಛಿ) ಗಣಿಗಾರಿಕೆ ಗೆ 71 ಕಾರ್ಯಾದೇಶಗಳನ್ನು ಒಂದು ವರ್ಷದ ಅವಧಿಗೆ ನೀಡಲಾಗಿದೆ. ಖನಿಜವನ್ನು ಬಾಕ್ಸೈಟ್ ಆಗಿ ವಿಂಗಡಿಸಿರುವುದರಿಂದ 17.03.2023 ರಂದು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994 ಗೆ ತಿದ್ದುಪಡಿ ತಂದು ತಿದ್ದುಪಡಿ ನಿಯಮ 2023 ಜಾರಿಗೊಳಿಸಲಾಗಿದೆ. ಹೀಗಾಗಿ ಲ್ಯಾಟರೈಟ್ ಖನಿಜಕ್ಕೆ ಕಾರ್ಯಾದೇಶ ನೀಡುವುದನ್ನು ಕೈಬಿಡಲಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.

    ವಾಹನಗಳಿಗೆ ಅನುಮತಿ:
    ಸ್ಥಳೀಯ ಜಿಲ್ಲೆಗೆ ಅಗತ್ಯವಿರುವಂತೆ ಕಾಯ್ದೆಗೆ ತಿದ್ದುಪಡಿ ಮಾಡಬಹುದು. ಔಠಿಛ್ಟಿಜಿಠಿಛಿ ಸಂಬಂಧಿಸಿದಂತೆ ಹಿಂದಿನ ಸರ್ಕಾರ ಮಾಡಲಾಗಿರುವ ತಿದ್ದುಪಡಿಯನ್ನು ಪುನಃ ತಿದ್ದುಪಡಿ ಮಾಡಿ ವಾಹನಗಳಿಗೆ ಅನುಮತಿ ನೀಡಬಹುದು. ಕ್ರಶಿಂಗ್ ಮಾಡಲಾದ ಮಣ್ಣನ್ನು ಜಿಲ್ಲೆಯೊಳಗಿನ ಬಳಕೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

    ಡಯಾಲಿಸಿಸ್ ಯಂತ್ರಗಳು ಕೆಟ್ಟಿವೆ
    ಜಿಲ್ಲಾ ಆಸ್ಪತ್ರೆಯಲ್ಲಿ 9 ಡಯಾಲಿಸಿಸ್ ಯಂತ್ರಗಳು ಕೆಟ್ಟಿದೆ. ಒಂದು ಯಂತ್ರ ಮಾತ್ರ ಕಾರ್ಯನಿರ್ವಹಿಸುತ್ತಿದೆ. ಅಲ್ಲಿನ ಸಿಬ್ಬಂದಿಗೆ 6 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎನ್ನುವುದು ಸಿಎಂ ಗಮನಕ್ಕೆ ಬಂದ ಕೂಡಲೇ ವೇತನ ನೀಡುವಂತೆ ಸೂಚಿಸಿದರು.

    ಸಭೆಯಲ್ಲಿ ಹಾಜರಿದ್ದವರು:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಚಿವರಾದ ಎಚ್.ಸಿ. ಮಹದೇವಪ್ಪ, ಚಲುವರಾಯಸ್ವಾಮಿ, ಬಿ.ನಾಗೇಂದ್ರ, ಹಿಂದುಳಿದ ವರ್ಗಗಳ ಆಯೋಗದ ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಮಂಜುನಾಥ್ ಭಂಡಾರಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮುಖಂಡರಾದ ಗೋಪಾಲ್ ಪೂಜಾರಿ, ಪ್ರಸಾದ್ ಕಾಂಚನ್, ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಲಿ, ಎಂ.ಎ.ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾದ ಗಿರೀಶ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts