ಆನ್‌ಲೈನ್ ಶಿಕ್ಷಣ ಕುರಿತು ಸಭೆ ನಡೆಸಿದ ಸುರೇಶ್‌ಕುಮಾರ್; ಏನಾಯಿತು ನಿರ್ಧಾರ?

suresh kumar
Published on

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಶಿಕ್ಷಣಕ್ಕೆ ಅವಕಾಶ ನೀಡಬೇಕೇ ಬೇಡವೇ ಎಂಬ ಕುರಿತು ಸೋಮವಾರ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್, ತೀರ್ಮಾನವನ್ನು ಮತ್ತೆ ಎರಡು ದಿನಗಳ ಕಾಲ ಮುಂದೂಡಿದ್ದಾರೆ.

ಈ ಕುರಿತು ಅವರೇ ಸೋಮವಾರ ಹೇಳಿಕೆ ನೀಡಿದ್ದಾರೆ. ಆನ್‌ಲೈನ್ ಶಿಕ್ಷಣ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಇವತ್ತು ಇಲಾಖೆ ಅಧಿಕಾರಿಗಳ ಸಭೆ ನಡೆಸಿದೆ. ಆದರೆ, ಆ ಸಭೆಯಲ್ಲಿ ನಡೆದ ಚರ್ಚೆ ಅಪೂರ್ಣವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾಳೆ (ಮಂಗಳವಾರ) ಪೂರ್ವ ನಿಯೋಜಿತ ಕಾರ್ಯಕ್ರಮದಂತೆ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳ ಪ್ರವಾಸವಿದೆ. ಅಲ್ಲಿ ಶಿಕ್ಷಣ ಇಲಾಖೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಆನ್‌ಲೈನ್ ಶಿಕ್ಷಣ ಕುರಿತು ಮತ್ತೆ ಬುಧವಾರವೇ ಸಭೆ ಸಾಧ್ಯವಾಗಲಿದೆ. ಅದರಲ್ಲಿ ಇನ್ನಷ್ಟು ವಿಸ್ತೃತವಾಗಿ ವಿಚಾರ ವಿಮರ್ಶೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಹೀಗಾಗಿ ರಾಜ್ಯದಲ್ಲಿ ಆನ್‌ಲೈನ್ ಶಿಕ್ಷಣ ನಡೆಸಬೇಕೆ ಬೇಡವೇ ಎಂಬ ಕುರಿತ ನಿರ್ಧಾರಕ್ಕಾಗಿ ಶಾಲಾ ಆಡಳಿತ ಮಂಡಳಿಗಳು, ಶಿಕ್ಷಕರು, ಪಾಲಕರು ಮತ್ತು ಮಕ್ಕಳು ಇನ್ನು ಎರಡು ದಿನ ಕಾಯುವುದು ಅನಿವಾರ್ಯವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net