More

    ಲೋಕಸಭೆ ಚುನಾವಣೆ ತಯಾರಿಗಾಗಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ: ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ನೀಡಿದ ಗುರಿ ಏನು?

    ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ನರೇಂದ್ರ ಮೋದಿ ನೇತೃತ್ವದ ಆಡಳಿತಾರೂಢ ಬಿಜೆಪಿಯು 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಜಯ ಗಳಿಸಿ ಅಧಿಕಾರಕ್ಕೆ ಬರಲು ಈಗಾಗಲೇ ತಯಾರಿ ನಡೆಸಿದೆ.

    ಈ ಚುನಾವಣೆ ತಯಾರಿ ಉದ್ದೇಶದಿಂದ ಶುಕ್ರವಾರ ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಆಂತರಿಕ ಸಭೆಯ ನಡೆಯಿತು. ಈ ಸಭೆಯಲ್ಲಿ ಉಪಸ್ಥಿತರಿದ್ದ ನಾಯಕರಿಗೆ ಪ್ರಧಾನಿ ಮೋದಿ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಹುದೊಡ್ಡ ಗುರಿಯನ್ನೇ ನೀಡಿದ್ದಾರೆ.

    ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು “ಮಿಷನ್ ಮೋಡ್” ನಲ್ಲಿ (ತ್ವರಿತ ಗತಿಯಲ್ಲಿ) ಕೆಲಸ ಮಾಡಲು ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ.

    ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಶೇಕಡಾ 50ಕ್ಕೂ ಹೆಚ್ಚು ಮತಗಳನ್ನು ಗಳಿಸಬೇಕು. ಅಂದರೆ, ಚಲಾವಣೆಯಾದ ಮತಗಳ ಪೈಕಿ ಅರ್ಧಕ್ಕಿಂತಲೂ ಹೆಚ್ಚು ಮತಗಳನ್ನು ಬಿಜೆಪಿ ಪಡೆದುಕೊಳ್ಳಬೇಕು ಎಂಬ ಬಹುದೊಡ್ಡ ಗುರಿಯನ್ನೇ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ.

    “ನಾವು 2019 ರಲ್ಲಿ 303 ಸ್ಥಾನಗಳನ್ನು ಗೆದ್ದಿದ್ದೇವೆ. ನಾವು ಮಿಷನ್ ಮೋಡ್‌ನಲ್ಲಿ ಕೆಲಸ ಮಾಡಿದರೆ 2024 ರಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ” ಎಂದು ಪ್ರಧಾನಿ ಹೇಳಿದ್ದಾರೆ.

    ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರಮಣಕಾರಿಯಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕು. ಪ್ರತಿಪಕ್ಷಗಳ ನಕಾರಾತ್ಮಕ ಪ್ರಚಾರಕ್ಕೆ ಸತ್ಯಗಳೊಂದಿಗೆ ಸಕಾರಾತ್ಮಕ ಉತ್ತರಗಳನ್ನು ನೀಡಬೇಕು ಎಂದು ಅವರು ಪಕ್ಷದ ವರಿಷ್ಠರಿಗೆ ಸಲಹೆ ನೀಡಿದ್ದಾರೆ.

    ಸಾರ್ವತ್ರಿಕ ಚುನಾವಣೆಯ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಕರೆದ ಎರಡು ದಿನಗಳ ಸಭೆಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳು, ರಾಜ್ಯ ಉಸ್ತುವಾರಿಗಳು, ರಾಜ್ಯ ಅಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಇತರ ಎಲ್ಲ ಘಟಕಗಳ ಮುಖ್ಯಸ್ಥರು ಭಾಗವಹಿಸಿದ್ದರು.

    ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಜನಪ್ರಿಯಗೊಳಿಸಲು ಮತ್ತು ಜಾಗೃತಿ ಮೂಡಿಸಲು ಸರ್ಕಾರ ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ ಅಭಿಯಾನವಾದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಂದಿನ ಕಾರ್ಯಾಚರಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸರ್ಕಾರದ “ಒಳ್ಳೆಯ ಕೆಲಸ”ಗಳ ಸುತ್ತ ತಮ್ಮ ಪ್ರಚಾರವನ್ನು ತೀವ್ರಗೊಳಿಸುವಂತೆ ಪಕ್ಷದ ನಾಯಕರಿಗೆ ಸಲಹೆ ನೀಡಲಾಯಿತು.

    ಐದು ರಾಜ್ಯಗಳ ಇತ್ತೀಚಿನ ವಿಧಾನಸಭೆ ಚುನಾವಣೆಗಳು ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಪಕ್ಷದ ರಾಷ್ಟ್ರವ್ಯಾಪಿ ಯೋಜನೆಗಳು ಸೇರಿದಂತೆ ಅನೇಕ ಮಹತ್ವದ ವಿಷಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

    ಡಿಸೆಂಬರ್ 13 ರಂದು ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಗಳ ನಂತರ ಪಕ್ಷದ ನಾಯಕರನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯ “ಹ್ಯಾಟ್ರಿಕ್” ಜಯವು 2024 ರ ಲೋಕಸಭೆ ಚುನಾವಣೆಯಲ್ಲಿಯೂ ಕೇಸರಿ ಪಕ್ಷಕ್ಕೆ ಮೂರನೇ ಗೆಲುವು ಖಾತರಿಪಡಿಸಿದೆ ಎಂದು ಹೇಳಿದ್ದರು.

    300ಕ್ಕೂ ಅಧಿಕ ಪ್ರಯಾಣಿಕರಲ್ಲಿ 13 ಅಪ್ರಾಪ್ತರು: ಭಾರತೀಯರು ಪ್ರಯಾಣಿಸುತ್ತಿದ್ದ ವಿಮಾನವನ್ನು ಫ್ರಾನ್ಸ್​ನಲ್ಲಿ ತಡೆಹಿಡಿದಿದ್ದೇಕೆ?:

    ಲಾರ್ಜ್​, ಮಿಡ್​, ಸ್ಮಾಲ್​ ಕ್ಯಾಪ್​ ಮ್ಯೂಚುವಲ್​ ಫಂಡ್​ಗಳು: ಹೊಸ ವರ್ಷದಲ್ಲಿ ಹೂಡಿಕೆಗೆ ಯಾವುದು ಉತ್ತಮ?

    ಸಿಎಂ ನೀಡಿದ 50ಸಾವಿರ ರೂ. ಚೆಕ್​ ಎನ್​ಕ್ಯಾಶ್​ ಮಾಡಿಕೊಳ್ಳಲ್ಲ: ಸುರಂಗದಲ್ಲಿ ಕಾರ್ಮಿಕರನ್ನು ರಕ್ಷಿಸಿದ ರ್ಯಾಟ್​ ಹೋಲ್​ ಮೈನರ್ಸ್ ತಕರಾರೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts