More

    ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಸಭೆ

    ಶಿವಮೊಗ್ಗ: ಜಿಲ್ಲೆಗೆ ಸಂಬಂಧಿಸಿದಂತೆ ಬಗರ್‌ಹುಕುಂ ಸಾಗುವಳಿದಾರರು, ಶರಾವತಿ ಸಂತ್ರಸ್ತರ ಸಮಸ್ಯೆ, ಅರಣ್ಯ ಹಾಗೂ ಕಂದಾಯ ಭೂಮಿಯ ದೀರ್ಘ ಕಾಲದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಉನ್ನತ ಮಟ್ಟದ ಸಭೆ ನಡೆಸಲು ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಅವಕಾಶ ನೀಡುವಂತೆ ಸಿಎಂ ಹಾಗೂ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
    ಅರಣ್ಯ, ಕಾನೂನು, ಕಂದಾಯ ಸಚಿವರು, ಮೂರೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಅಪರ ಕಾರ್ಯದರ್ಶಿಗಳು ಹಾಗೂ ಸಿಎಂ ಕಾನೂನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರನ್ನು ಒಳಗೊಂಡಂತೆ ಸಭೆ ನಡೆಸಲು ಸಮಯ ನಿಗದಿ ಮಾಡುವಂತೆ ಪತ್ರ ವ್ಯವಹಾರ ನಡೆಸಲಾಗಿದೆ ಎಂದಿದ್ದಾರೆ.
    ಶರಾವತಿ ಸಂತ್ರಸ್ತರ ಭೂಮಿ ಡಿನೋಟಿಫಿಕೇಷನ್ ರದ್ದಾಗಿರುವುದು, ಇದಕ್ಕೆ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯುವುದು, ಅರಣ್ಯ ಹಕ್ಕು ಕಾಯ್ದೆ ಸಮಪರ್ಕ ಅನುಷ್ಠಾನ, ಡೀಮ್ಡ್ ಫಾರೆಸ್ಟ್ ಸಮಸ್ಯೆ, ಬಗರ್‌ಹುಕುಂ ಸಾಗುವಳಿ ಚೀಟಿ ವಿತರಣೆಗೆ ಇರುವ ಸವಾಲುಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
    1964 ಭೂ ಕಂದಾಯ ಕಾಯ್ದೆದೆ ಜಾರಿ ಪೂರ್ವದಲ್ಲಿ ಶಿವಮೊಗ್ಗ , ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಜೂರು ಮಾಡಲಾದ ಮನೆಗಳ ಹಕ್ಕುಪತ್ರ ಕಾಯಂಗೊಳಿಸುವ ವಿಚಾರವಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಅಧಿವೇಶನ ನಡೆವಾಗಲೇ ಸಭೆ ನಡೆಸಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಮಾನ್ಯ ಸಚಿವರುಗಳ ಸಭೆ ನಡೆಸಲಾಗುವುದು ಎಂದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts