CM Siddaramaiah ಜೊತೆಗಿನ ಸಭೆ ಯಶಸ್ವಿ; ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್

CM Siddaramaiah
Published on

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ, ವರ್ಗಾವಣೆ, ಪ್ರಮೋಷನ್​ಗೆ ಸನ್ನದುದಾರರಿಂದ ಲಂಚ ಸ್ವೀಕರಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಮದ್ಯ ಮಾರಾಟಗಾರರು ನವೆಂಬರ್​ 20ರಂದು ರಾಜ್ಯಾದ್ಯಂತ ನಡೆಸಲು ಉದ್ದೇಶಿಸಿದ್ದ ಬಂದ್​ಅನ್ನು ಹಿಂಪಡೆಯಲಾಗಿದ್ದು, ಮುಖ್ಯಮಂತ್ರಿಗಳ (CM Siddaramaiah) ಜೊತೆಗಿನ ಸಭೆ ಯಶಸ್ವಿಯಾಗಿದೆ.

ಗೃಹ ಕಚೇರಿ ಕೃಷ್ಣದಲ್ಲಿ ಮದ್ಯ ಮಾರಾಟಗಾರರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಹಲವು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ enforcement ಮಾಡಲಾಗುವುದು. ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೊರಳಿನಿಂದ ಸ್ಪಷ್ಟಪಡಿಸಿದ್ದಾರೆ.

ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮದ್ಯ ಮಾರಾಟಗಾರರ ಜೊತೆಗಿನ ಸಭೆಯ ಬಳಿಕ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net